ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆ.ಆರ್.ಪೇಟೆಯಲ್ಲಿ ಇಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಚಾಲನೆ ನೀಡಿದರು.
ಗೋಪೂಜೆ ಸಲ್ಲಿಸುವ ಮೂಲಕ ಮೂರನೇ ಹಂತದ ಲಸಿಕಾ ಅಭಿಯಾನಕ್ಕೆ ಸಚಿವರು, ಕೆ.ಆರ್.ಪೇಟೆಯಲ್ಲಿ ಸುಮಾರು 1.06 ಲಕ್ಷದ ದನಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ ಎಂದರು.
2019ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದು, 6 ತಿಂಗಳಿಗೊಮ್ಮೆ ಲಸಿಕೆಯನ್ನು ನೀಡಲಾಗುತ್ತಿದೆ. ಒಂದು ತಿಂಗಳೊಳಗೆ ಮೂರನೇ ಹಂತದ ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.