Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನ.30ರಂದು ವಿಜೃಂಭಣೆಯ ಕನಕ ಜಯಂತಿ ಆಚರಣೆ

ಮಂಡ್ಯ ಜಿಲ್ಲಾಡಳಿತದ ವತಿಯಿಂದ ಈ ಬಾರಿ ನವೆಂಬರ್ 30ರಂದು ವಿಜೃಂಭಣೆಯಿಂದ ಕನಕ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕನಕ ಜಯಂತಿ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ನ.30 ರಂದು ಬೆಳಿಗ್ಗೆ 11.30 ಗಂಟೆಗೆ ಅಂಬೇಡ್ಕರ್ ಭವನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪನ್ಯಾಸಕರು ಕನಕದಾಸರ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.

ಅಂದು ಬೆಳಿಗ್ಗೆ 10.30 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಾಗುವುದು. ಮೆರವಣಿಗೆಗೆ ಮೆರಗು ನೀಡಲು ವಿವಿಧ ಕಲಾತಂಡಗಳ ಭಾಗವಹಿಸಿ, ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಡಾ. ಬಿ.ಆರ್ ಅಂಬೇಡ್ಕರ್ ಭವನ ತಲುಪಲಿವೆ ಎಂದರು.

ಕನಕದಾಸರು ಒಂದು ಸಮಾಜಕ್ಕೆ ಸೀಮಿತವಾದವರಲ್ಲ ಅವರ ತತ್ವ ಮತ್ತು ಆದರ್ಶ ಎಲ್ಲರೂ ಅನುಸರಿಸಿದರೆ ಉತ್ತಮ ಸಮಾಜ ನಿರ್ಮಾಣವಾಗುತ್ತದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎಚ್.ಎಲ್ ನಾಗರಾಜು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಶ್ರೀನಿವಾಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್ ಉದಯ್ ಕುಮಾರ್, ಜಿ.ಪಂ. ಉಪ ಕಾರ್ಯದರ್ಶಿ ಕೆ. ಆನಂದ್ ಕುಮಾರ್, ಮಂಡ್ಯ ಜಿಲ್ಲಾ ಕುರುಬ ಸಮಾಜದ ಜಿಲ್ಲಾಧ್ಯಕ್ಷ ಸುರೇಶ್, ಮಾಜಿ ಅಧ್ಯಕ್ಷ ಕೆ.ಎಚ್ ನಾಗರಾಜು, ಮುಖಂಡರಾದ ದೊಡ್ಡಯ್ಯ, ಮಹೇಶ್, ಶ್ರೀನಿವಾಸ್ ಸೇರಿದಂತೆ ಇನ್ನಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!