Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಡಿ.3ರಂದು 536ನೇ ಕನಕ ಜಯಂತ್ಯೋತ್ಸವ

ಮಳವಳ್ಳಿ ತಾಲ್ಲೂಕು ಕುರುಬ ಸಮಾಜದ ವತಿಯಿಂದ 536ನೇ ಕನಕ ಜಯಂತೋತ್ಸವ ಕಾರ್ಯಕ್ರಮವು ಡಿ.3 ರಂದು ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಪುಟ್ಟಬಸವಯ್ಯ ತಿಳಿಸಿದರು.

ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭದ ದಿವ್ಯ ಸಾನಿಧ್ಯವನ್ನು ಕಾಗಿನೆಲೆ ಕನಕಗುರು ಪೀಠ ಪೀಠಾಧ್ಯಕ್ಷ ಶಿವಾನಂದಪುರಿ ಮಹಾಸ್ವಾಮೀಜಿ ವಹಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಪಿ.ಎಂ. ನರೇಂದ್ರಸ್ವಾಮಿ ವಹಿಸುವರು. ಕೆ.ಪಿ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಬಿ.ಎಸ್. ಶಿವಣ್ಣ ಕಾರ್ಯಕ್ರಮ ಉದ್ಘಾಟಿಲಿದ್ದು, ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಪುಟ್ಟಬಸವಯ್ಯ ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಶಾಸಕರಾದ ಡಿ. ರವಿಶಂಕರ್‌, ಮಂಜುನಾಥ್, ವಿಧಾನಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ದಿನೇಶ್‌ಗೂಳಿಗೌಡ, ಮಧು ಜಿ. ಮಾದೇಗೌಡರು, ಮಂಡ್ಯ ಜಿಲ್ಲಾ ಕುರುಬರ ಸಂಘ ಅಧ್ಯಕ್ಷ ಸುರೇಶ್‌, ತಹಸಿಲ್ದಾರ್ ಲೋಕೇಶ್‌ , ತಾ.ಪಂ ಇಓ ಮಮತ, ಡಿವೈಎಸ್ ಪಿ ಕೃಷ್ಣಪ್ಪ, ಪುರಸಭೆ ಮುಖ್ಯಾಧಿಕಾರಿ ನಾಗರತ್ನಮ್ಮ, ಬಿ.ಇ.ಓ ಚಂದ್ರಪಾಟಿಲ್‌ ಸೇರಿದಂತೆ ಇತರರು ಭಾಗವಹಿಸಲಿದ್ದು, ಉಪನ್ಯಾಸಕ ಡಾ.ರವೀಂದ್ರ ಕನಕದಾಸರ ಬಗ್ಗೆ ಉಪನ್ಯಾಸ ನೀಡಲಿದ್ದಾರೆಂದು ಹೇಳಿದರು.

ಅಂದು ಮಳವಳ್ಳಿ ತಾಲ್ಲೂಕು ಪಂಚಾಯಿತಿಯಿಂದ ಡಾ. ಬಿ.ಆರ್ ಅಂಬೇಡ್ಕರ್ ಭವನದವರೆಗೆ ಬೆಳಿಗ್ಗೆ 10 ಗಂಟೆಗೆ ಬೆಳ್ಳಿ ರಥದಲ್ಲಿ ಶ್ರೀಕನಕದಾಸ ರ ಭಾವಚಿತ್ರ ಮೆರವಣಿಗೆಯೂ ಜಾನಪದ ಕಲಾಮೇಳದೊಂದಿಗೆ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕೋರಿದರು.

ಗೋಷ್ಟಿಯಲ್ಲಿ ರಾಮಚಂದ್ರ, ತಾಲ್ಲೂಕು ಅಧ್ಯಕ್ಷ ನಾಗರಾಜು, ಪುರಸಭೆ ಮಾಜಿ ಸದಸ್ಯ ರಾಜು, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಲಿಂಗರಾಜು, ಬಂಕ್ ಮಹದೇವು, ದುನಿಯಾ ಮಂಜು, ಉಮೇಶ್, ಮಹೇಶ್, ಮಹದೇವು ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!