Friday, September 20, 2024

ಪ್ರಾಯೋಗಿಕ ಆವೃತ್ತಿ

ಸಾಮಾಜಿಕ ಅವ್ಯವಸ್ಥೆಯ ವಿರುದ್ಧ ಕನಕದಾಸರ ಹೋರಾಟ: ಲೋಕೇಶ್

ಕನಕದಾಸರು ತಮ್ಮ ಕೀರ್ತನೆಗಳಲ್ಲಿ ಭಕ್ತಿ, ವೈರಾಗ್ಯ, ಭಜನೆಗಳಷ್ಟೇ ಅಲ್ಲದೇ ಹದಿನಾರನೆಯ ಶತಮಾನದ ಸಾಮಾಜಿಕ ಅವ್ಯವಸ್ಥೆಯ ವಿರುದ್ಧ ಸಮರ ಸಾರಿದ ಮಹಾನ್ ವ್ಯಕ್ತಿ ಕನಕದಾಸರು ಎಂದು ತಹಸಿಲ್ದಾರ್ ಕೆ.ಎನ್ ಲೋಕೇಶ್ ತಿಳಿಸಿದರು.

ಮಳವಳ್ಳಿ ಪಟ್ಟಣದ ತಾಲೂಕು ಕಚೇರಿಯಲ್ಲಿ ಭಕ್ತ ಕನಕದಾಸ ಜಯಂತಿ ಆಚರಿಸಿ ಮಾತನಾಡಿದವರು ಸಾಮಾಜಿಕ ಮಡಿವಂತಿಕೆಯನ್ನು ಕುರಿತು ತಮ್ಮ ಕೀರ್ತನೆಗಳಲ್ಲಿ ವಿಢಂಬಿಸಿದ್ದಾರೆ. ಅಂದಿನ ಸಮಾಜದ ಸ್ಥಿತಿಗತಿಗಳನ್ನು ತಿದ್ದುವ ಪ್ರಯತ್ನ ಮಾಡಿರುವ ದಾಸರಿವರು. ದಾಸ ಸಾಹಿತ್ಯಕ್ಕೆ ವೈಶಿಷ್ಟಪೂರ್ಣವಾದ ಮೆರುಗನ್ನು ತಂದಿತ್ತ ಪಾಂಡಿತ್ಯ ಪೂರ್ಣ ಕವಿ ಕನಕದಾಸರು ಎಂದು ಬಣ್ಣಿಸಿದರು.

ಸಹಜ ಬದುಕಿನಿಂದ ಕೀರ್ತನರಾರರಾಗಿ, ತತ್ವಜ್ಞಾನಿಯಾಗಿ, ಸಂತರಾಗಿ, ದಾರ್ಶನಿಕರಾಗಿ ಕನ್ನಡ ನಾಡಿನ ಸಾಂಸ್ಕೃತಿಕ ಪರಂಪರೆಗೆ ಕನಕದಾಸರು ಅನನ್ಯ ಕೊಡುಗೆಯನ್ನು ನೀಡಿದ್ದಾರೆ. ಕನಕದಾಸರು ದಂಡನಾಯಕರಾಗಿದ್ದು, ಯುದ್ಧದಲ್ಲಿ ಸೋತ ನಂತರ ಅವರಿಗೆ ವೈರಾಗ್ಯ ಉಂಟಾಗಿ ಹರಿಭಕ್ತ ದಾಸರಾದರು ಎಂಬ ಮಾತಿದೆ ಎಂದು ಅಭಿಪ್ರಾಯಪಟ್ಟರು.

ಮುಖಂಡ ಪುಟ್ಟಬಸವಯ್ಯ ಮಾತನಾಡಿ, ಕನಕದಾಸರು ಶ್ರೀವ್ಯಾಸರಾಯರ ಮೆಚ್ಚಿನ ಶಿಷ್ಯರಾಗಿದ್ದರು. ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರೂ ಹೌದು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದವರು. ಕಾಗಿನೆಲೆಯ ಆದಿಕೇಶವರಾಯ ಎಂಬುದು ಇವರ ಕೀರ್ತನೆಗಳ ಅಂಕಿತನಾಮ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕುರುಬರ ಸಂಘ ದ ತಾಲೂಕು ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ರಾಜಣ್ಣ, ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪಾಟೀಲ್, ಪುರಸಭೆ ಮುಖ್ಯಾಧಿಕಾರಿ ನಾಗರತ್ನ,ಸಿಡಿಪಿಓ ದೀಪ, ಹಿಂದುಳಿದ ವರ್ಗಗಳ ಅಧಿಕಾರಿ ನಾಗರಾಜು, ಮುಂಖಂಡರಾದ ಬಂಕ್ ಮಹಾದೇವ, ಸೋಮಣ್ಣ, ಗುರುಪ್ರಸಾದ್, ಉಮೇಶ್ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!