ವಿಜಯಪುರ ಜಿಲ್ಲೆಗೆ ಭೇಟಿ ನೀಡುವುದನ್ನು ನಿರ್ಬಂಧಿಸಿ ವಿಜಯಪುರ ಜಿಲ್ಲಾಧಿಕಾರಿ ಗುರುವಾರವಷ್ಟೇ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.
ಕಲಬುರ್ಗಿ ಪೀಠದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ನೇತೃತ್ವದ ಏಕಸದಸ್ಯ ಪೀಠವು ಅರ್ಜಿ ವಜಾಗೊಳಿಸಿದೆ.
ಲಿಂಗಾಯತ ಮಠಾಧಿಪತಿಗಳ ಒಕ್ಕೂಟವು, ಕಲಾವಿದರಿಂದ ಕೂಡಿದ ಮುಖ್ಯಮಂತ್ರಿಗಳ ಕೃಪಾಪೋಷಿತ ನಾಟಕ ಮಂಡಳಿ ಎಂಬುದು ಸೇರಿ ಹಲವು ಆಕ್ಷೇಪಾರ್ಹದ ಮಾತುಗಳನ್ನು ಆಡಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲಾಧಿಕಾರಿ ಅವರು ಸ್ವಾಮೀಜಿ ಅಕ್ಟೋಬರ್ 16ರಿಂದ ಡಿಸೆಂಬರ್ 14ರವರೆಗೆ ವಿಜಯಪುರ ಜಿಲ್ಲೆ ಪ್ರವೇಶಿಸಬಾರದು ಎಂದು ಆದೇಶಿಸಿದ್ದರು.




