Thursday, September 19, 2024

ಪ್ರಾಯೋಗಿಕ ಆವೃತ್ತಿ

ಕನ್ನಡಕ್ಕೆ ಬರೀ ₹ 3 ಕೋಟಿ, ಸಂಸ್ಕೃತಕ್ಕೆ ₹ 643 ಕೋಟಿ : ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಗುಡುಗಿದ ಎಚ್.ಡಿ.ಕುಮಾರಸ್ವಾಮಿ

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!!! ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“>

ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ,ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿಯಾಗಿದೆ.

ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ ಎಂದು ಅವರು ಕಿಡಿಕಾರಿದ್ದಾರೆ.

ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಬಿಜೆಪಿ ಸರಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ ಎಂದು ಕುಮಾರಸ್ವಾಮಿ ಟ್ವೀಟ್ಟಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!