Monday, October 28, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಕನ್ನಡ ರಾಜ್ಯೋತ್ಸವ ಅದ್ಧೂರಿ ಆಚರಣೆ; ಬಿ.ವಿ.ಕುಮಾರ್

ಮಂಡ್ಯ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದರಿಂದ ಪ್ರಸಕ್ತ ವರ್ಷದ ಕನ್ನಡ ರಾಜೋತ್ಸವವನ್ನು ವಿಶೇಷವಾಗಿ ಅದ್ದೂರಿಯಾಗಿ ಆಚರಿಸಲು ಸಾರ್ವಜನಿಕರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಹಕಾರ ನೀಡಬೇಕೆಂದು ಪ್ರಭಾರ ತಹಶೀಲ್ದಾರ್ ಬಿ.ವಿ.ಕುಮಾರ್ ತಿಳಿಸಿದರು.

ಮಳವಳ್ಳಿ ಪಟ್ಟಣದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ನ.1ರ ಕನ್ನಡ ರಾಜೋತ್ಸವದ ಅಂಗವಾಗಿ ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನ. 1ರಂದು ಪಟ್ಟಣದ ಭಕ್ತಕನಕದಾಸ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ ವತಿಯಿಂದ ನಡೆಯುವ ಕನ್ನಡ ರಾಜೋತ್ಸವ ಕಾರ್ಯಕ್ರಮವನ್ನು ಶಾಸಕ ಪಿ.ಎಂ ನರೇಂದ್ರಸ್ವಾಮಿ ಅವರು ವಹಿಸಲಿದ್ದು, ಕಾರ್ಯಕ್ರಮಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳ ಕಡ್ಡಾಯವಾಗಿ ಹಾಜರಾಗಬೇಕೆಂದು ಸೂಚನೆ ನೀಡಿದರು.

ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ವಹಿಸಿರುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು, ಸ್ವಚ್ಚತೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಲಭ್ಯಗಳಿಗೆ ಹೆಚ್ಚು ಒತ್ತು ನೀಡಬೇಕು, ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಕನ್ನಡ ರಾಜೋತ್ಸವ ಹಬ್ಬದ ಮೆರಗು ಹೆಚ್ಚಿಸಲಿದೆ, ಜೊತಗೆ ಎಲ್ಲ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಾಂಲಕಾರ ಮಾಡುವುದರ ಜತೆಗೆ ಪಟ್ಟಣದ ಪ್ರಮುಖ ರಸ್ತೆಗಳು ಹಾಗೂ ಕ್ರೀಡಾಂಗಣದ ಸುತ್ತ ಕನ್ನಡ ಬಾವುಟಗಳನ್ನು ಅಳವಡಿಸಬೇಕು ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಕ ಅಧಿಕಾರಿ ಎಚ್.ಜಿ.ಶ್ರೀನಿವಾಸ್ ಮಾತನಾಡಿ, ಪ್ರಸಕ್ತ ವರ್ಷ ನಡೆಯುತ್ತಿರುವ ಕನ್ನಡ ರಾಜೋತ್ಸವ ತನ್ನದೇ ಆದ ವಿಶೇಷತೆಯನ್ನು ಪಡೆದುಕೊಂಡಿರುವುದರಿAದ ತಾಲ್ಲೂಕಿನ ಅಧಿಕಾರಿಗಳ ಒಗ್ಗಟ್ಟಿನಿಂದ ಕನ್ನಡ ರಾಜೋತ್ಸವವನ್ನು ಹಬ್ಬದ ರೀತಿ ಆಚರಿಸಲು ಎಲ್ಲರ ಸಹಕಾರ ಅಗತ್ಯ ಎಂದರು.

ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಚೇತನ್ ಕುಮಾರ್ ಮಾತನಾಡಿ, ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಈ ಬಾರಿಯ ಕನ್ನಡ ರಾಜೋತ್ಸವವನ್ನು ವಿಜೃಂಬAಣೆಯಿAದ ಆಚರಿಸಲು ಪ್ರತಿಯೊಬ್ಬರು ತಾಲ್ಲೂಕು ಆಢಳಿತಕ್ಕೆ ಸಹಕಾರ ನೀಡಬೇಕು, ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ಬಾವುಟಗಳನ್ನು ಕೊಡಿಸಲಾಗುವುದು ಎಂದು ತಿಳಿಸಿದರು.

ಕರವೇ ತಾಲ್ಲೂಕು ಅಧ್ಯಕ್ಷ ಅಪ್ಪೇಗೌಡ ಸಭೆಯಲ್ಲಿ ಮಾತನಾಡಿ, ನಾಡುನುಡಿ ನೆಲಜಲ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಕನ್ನಡ ರಾಜೋತ್ಸವಕ್ಕೆ ಕನ್ನಡ ಜನಪರ ಸಂಘಟನೆಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಿದೆ ಎಂದು ಹೇಳಿದರು.

ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!