Thursday, October 10, 2024

ಪ್ರಾಯೋಗಿಕ ಆವೃತ್ತಿ

ಕನ್ನಡ ಸಾಹಿತ್ಯ ಪರಿಷತ್ತಿಗೆ ಶತಮಾನದ ಇತಿಹಾಸವಿದೆ

ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1915 ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ ಮಾಡಿದ್ದು,ಒಂದು ಶತಮಾನದ ಇತಿಹಾಸ ಹೊಂದಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಅಧ್ಯಕ್ಷ ಸಿ.ಕೆ. ರವಿಕುಮಾರ್ ಚಾಮಲಾಪುರ ತಿಳಿಸಿದರು.

ಮಂಡ್ಯ ನಗರದ ಕಾರ್ಮೆಲ್ ಕಾನ್ವೆಂಟ್ ಶಾಲಾ ಆವರಣದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಮಂಡ್ಯ ನಗರ ಕನ್ನಡ ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ಮಕ್ಕಳ ಹಕ್ಕುಗಳ ಬಗ್ಗೆ ಕಾನೂನು ಅರಿವು ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮೈಸೂರು ರಾಜರು ಈ ಭಾಗಕ್ಕೆ ಎಲ್ಲಾ ರೀತಿಯ ಉತ್ತಮ ಆಡಳಿತವನ್ನು ಕೊಡುತ್ತಿದ್ದರು. ಸಾಹಿತ್ಯ, ಸಂಸ್ಕೃತಿ, ನೃತ್ಯ, ಸಂಗೀತ ಇವುಗಳನ್ನು ಏಳಿಗೆ ಮಾಡುವ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತನ್ನ ಸ್ಥಾಪನೆ ಮಾಡಿದರು ಎಂದರು.

ಕನ್ನಡ ಸಾಹಿತ್ಯ ಪರಿಷತ್ ಸಾಹಿತಿಗಳ ತಾಣವಾಗಿದೆ. ಕಾದಂಬರಿ, ಕಾವ್ಯ ಸಾಹಿತ್ಯದ ವಿವಿಧ ಪ್ರಾಕಾರಗಳಲ್ಲಿ ತಮ್ಮ ಪ್ರತಿಗಳನ್ನು ರಚನೆ ಮಾಡುತಿದ್ದರು. ಬಡ ಸಾಹಿತಿಗಳ ಕೃತಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ ಪ್ರೋತ್ಸಾಹ ಧನ ನೀಡಿ ಅವರ ಪುಸ್ತಕವನ್ನು ಪ್ರಕಟಣೆ ಮಾಡುವ ಜವಾಬ್ದಾರಿಯನ್ನು ತೆಗೆದುಕೊಂಡಿದೆ ಎಂದರು.

ಸಾಹಿತ್ಯ ಪರಿಷತ್ತು ಪ್ರತಿ ಕೇಂದ್ರಗಳಲ್ಲೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ . ಎಸ್ ಎಸ್ಎಲ್ ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ ಎಂದರು.

ಪ್ರತಿ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವುದರ ಮುಖಾಂತರ ಶಿಕ್ಷಕರನ್ನು ಅಭಿನಂದಿಸುವಂತಹ ಕೆಲಸವನ್ನು ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಾ ಬಂದಿದೆ ಎಂದರು.

ಕಾರ್ಯಕ್ರಮದಲ್ಲಿ ಕಾರ್ಮೆಲ್ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕರಾದ ಸಿಸ್ಟರ್ ಗ್ಲಾಡಿಸ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಸಂಪನ್ಮೂಲ ಸದಸ್ಯ ಕಾರ್ಯದರ್ಶಿ ನಳಿನಿ ಕುಮಾರಿ ಎ.ಎಂ, ಕ.ಸಾ.ಪ ನಗರ ಅಧ್ಯಕ್ಷೆ ಸುಜಾತ ಕೃಷ್ಣ, ಕಾರ್ಮೆಲ್ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆಡಳಿತ ಅಧಿಕಾರಿ ಸಿಸ್ಟರ್ ಜಾಯ್ಸ್, ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಸಿಸ್ಟರ್ ವೆನಿಸ್ಸಾ, ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಲ್. ರೂಪಪ್ರಿಯದರ್ಶಿನಿ, ತಾ.ಕ.ಸಾ.ಪ ಎಮ್ ಎಚ್ ಶಿವಲಿಂಗೇಗೌಡ, ಬಿ.ಎಲ್ ನಾಗಲಿಂಗಪ್ಪ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!