ಕೃಷ್ಣರಾಜಸಾಗರ ಜಲಾನಯನ ವ್ಯಾಪ್ತಿಯಲ್ಲಿ ಸಾಕಷ್ಟು ಮಳೆಯಾಗುತ್ತಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುನ್ನೆಚ್ಚರಿಕೆ ಸೂಚನೆ ಹೊರಡಿಸಿದ್ದಾರೆ.
ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 25,000 ದಿಂದ 75,000 ಕ್ಯೂಸೆಕ್ಸ್ ನೀರನ್ನು ಹೊರಕ್ಕೆ ಬಿಡುಗಡೆ ಮಾಡುತ್ತಿರುವ ಹಿನ್ನಲೆಯಲ್ಲಿ ನದಿ ಪಾತ್ರದ ಎರಡು ದಂಡೆಗಳಲ್ಲಿ ಇರುವ ಸಾರ್ವಜನಿಕರು ಹಾಗೂ ತಗ್ಗು ಪ್ರದೇಶದಲ್ಲಿರುವ ಜನರು ತಮ್ಮ ಆಸ್ತಿ-ಪಾಸ್ತಿ ಹಾಗೂ ಜಾನುವಾರುಗಳ ರಕ್ಷಣೆಗೆ ಮುಂದಾಗ ಬೇಕು ಹಾಗೂ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಮುನ್ನೆಚ್ಚರಿಕೆ ಸೂಚನೆ ನೀಡಿದ್ದಾರೆ.