ರಾಜಸ್ತಾನದಲ್ಲಿ ಕನ್ಹಯ್ಯಲಾಲ್ ಹತ್ಯೆ ಪ್ರಕರಣ ಖಂಡಿಸಿ ಶ್ರೀರಂಗಪಟ್ಟಣದಲ್ಲಿ ಹಿಂದೂ ಸಂಘಟನೆ ಮುಖಂಡರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ವಿಶ್ವ ಹಿಂದೂ ಪರಿಷತ್‌ನ ಮುಖಂಡ ಬೆಳಗೊಳ ಸುನೀಲ್ ನೇತೃತ್ವದಲ್ಲಿ ಕಾರ್ಯಕರ್ತರು ಪಟ್ಟಣದ ಕುವೆಂಪು ವೃತ್ತದಲ್ಲಿ ಜಮಾಯಿಸಿ ಪಟ್ಟಣದ ಮುಖ್ಯ ರಸ್ತೆಯಲ್ಲಿ ಬೈಕ್ ರ‍್ಯಾಲಿ ಮೂಲಕ ತಾಲೂಕು ಕಚೇರಿಗೆ ತೆರಳಿ ಧರಣಿ ನಡೆಸಿದರು.
ಹಿಂದೂ ವ್ಯಕ್ತಿಯ ಹತ್ಯೆ ಮಾಡಿದ ಮುಸ್ಲಿಂ ಉಗ್ರರ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಮಾತನಾಡಿದ ಸುನೀಲ್, ಅಮಾಯಕ ಟೈಲರಿಂಗ್ ಕೆಲಸ ಮಾಡಿ ಜೀವನ ನಡೆಸುವ ವ್ಯಕ್ತಿಯನ್ನು ಮುಸ್ಲಿಂ ಸಂಘಟನೆಯ ಉಗ್ರರು ಹತ್ಯೆ ಮಾಡಿರುವುದು ಖಂಡನೀಯವಾಗಿದೆ. ಹಾಡು ಹಗಲೇ ಹತ್ಯೆ ಮಾಡಲು ಹೊರಟಿರುವ ಇಂತಹ ಸಂಘಟನೆಗಳ ವಿರುದ್ದ ಸರ್ಕಾರ ಕ್ರಮ ಕೈಗೊಂಡು, ಕನ್ಹಯ್ಯಲಾಲ್ ಅವರನ್ನು ಹತ್ಯೆ ಮಾಡಿದ ಉಗ್ರರನ್ನು ಕೂಡಲೇ ಹಿಂದು ಮುಂದು ಯೋಚಿಸದೆ ಸರ್ಕಾರ ನೇಣಿಗೆ ಹಾಕಬೇಕು ಎಂದು ಆಗ್ರಹಿಸಿದರು.
ಸುಮಾರು 50ಕ್ಕೂ ಹೆಚ್ಚು ಪ್ರತಿಭಟನಕಾರರು ಪ್ಭತಿಟನೆಯಲ್ಲಿದ್ದು,ಉಪ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.