Saturday, May 18, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕರವೇ ನಾರಾಯಣಗೌಡ ಬಿಡುಗಡೆಗೆ ಆಗ್ರಹಿಸಿ ಪಂಜಿನ ಮೆರವಣಿಗೆ

ಕನ್ನಡ ನಾಮಫಲಕಕ್ಕಾಗಿ ಬೆಂಗಳೂರಿನಲ್ಲಿ ಹೋರಾಟ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಅವರನ್ನು ಸರ್ಕಾರ ಬಂಧಿಸಿದ್ದು, ಅವರನ್ನು ಬಿಡುಗಡೆಗೆ ಆಗ್ರಹಿಸಿ ವೇದಿಕೆ ಕಾರ್ಯಕರ್ತರು ಮಂಡ್ಯನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಶನಿವಾರ ಸಂಜೆ ಪಂಜಿನ ಮೆರವಣಿಗೆ ನಡೆಸಿದರು.

ಮಂಡ್ಯನಗರದ ಸಿಲ್ವರ್ ಜ್ಯೂಬಿಲಿ ಪಾರ್ಕ್ ನಿಂದ ಪಂಜುಗಳನ್ನು ಹಿಡಿದು ಮೆರವಣಿಗೆ ಹೊರಟ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಸಂಜಯ ವೃತ್ತದವರೆಗೆ ಮೆರವಣಿಗೆ ನಡೆಸಿ ಕನ್ನಡ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ರಾಜಧಾನಿ ಬೆಂಗಳೂರಿನಲ್ಲಿ ನಮ್ಮ ಭಾಷೆ ನಮ್ಮ ಹಕ್ಕು ಘೋಷಣೆಯಡಿ ಕನ್ನಡ ನಾಮಫಲಕ ಆಂದೋಲನ ನಡೆಸಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರನ್ನು ಬಂಧಿಸಿರುವ ಸರ್ಕಾರದ ಕ್ರಮ ವಿರೋಧಿಸಿದ ಪ್ರತಿಭಟನಾಕಾರರು, ಕನ್ನಡ ನಾಡಿನಲ್ಲಿ ಮಾತೃಭಾಷೆ ಕನ್ನಡದ ಪರ ಚಳವಳಿ ನಡೆಸಿದ ಹೋರಾಟಗಾರರನ್ನು ಬಂಧಿಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದೆ, ಆಳುವ ಸರ್ಕಾರ ಕನ್ನಡಕ್ಕೆ ಮಾನ್ಯತೆ ನೀಡದೆ. ಪರಭಾಷ ವ್ಯಾಮೋಹ ತಾಳಿದೆ, ಕನ್ನಡಕ್ಕಾಗಿ ಹೋರಾಡಿದ ನಾರಾಯಣ ಗೌಡಸೇರಿದಂತೆ ಕನ್ನಡಪರ ಹೋರಾಟಗಾರರನ್ನು ಈ ತಕ್ಷಣ ಬಿಡುಗಡೆ ಮಾಡಬೇಕು, ಇಲ್ಲದಿದ್ದರೆ ನಾಡಿನ ಎಲ್ಲಡೆ ಕನ್ನಡಿಗರು ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು

ಕನ್ನಡದಲ್ಲಿ ನಾಮಫಲಗಳನ್ನು ಅಳವಡಿಸುವಂತೆ ಕೇಳುವುದೇ ತಪ್ಪೇ, ರಾಜ್ಯದಲ್ಲಿರುವ ವರ್ತಕರು ಮತ್ತು ವ್ಯಾಪಾರಸ್ಥರ ಮಳಿಗೆಗಳಲ್ಲಿ ಕನ್ನಡ ಅಕ್ಷರಗಳಲ್ಲಿ ನಾಮಫಲಕ ಗಳನ್ನು ಅಳವಡಿಸುವಂತೆ ಸರ್ಕಾರದ ಆದೇಶವಿದ್ದರೂ ಸಹ ಕನ್ನಡದ ನಾಮಫಲಕ ಹಾಕಿಲ್ಲ ಕನ್ನಡದ ನಾಮಫಲಕ ಹಾಕುವಂತೆ ಜಾಗೃತಿ ಮೂಡಿಸಲು ಹೋದವರನ್ನು ಪೊಲೀಸರು ಬಂಧಿಸಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕರವೇ ಜಿಲ್ಲಾಧ್ಯಕ್ಷ ಶಂಕರೇಗೌಡ ಸೇರಿದಂತೆ ಹಲವು ಕಾರ್ಯಕರ್ತರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!