Tuesday, September 17, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜು.26ಕ್ಕೆ ಕಾರ್ಗಿಲ್ ವಿಜಯೋತ್ಸವದ ರಜತ ಮಹೋತ್ಸವ

ಮಂಡ್ಯ ತಾಲ್ಲೂಕಿನ ಯಲಿಯೂರು ಸರ್ಕಲ್ ಸಮೀಪದ ಅನಿಕೇತನ ಪ್ರಿ ಯೂನಿವರ್ಸಿಟಿ ಕಾಲೇಜು ಹಾಗೂ 14ನೆ ಕರ್ನಾಟಕ ಎನ್‌ಸಿಸಿ ಬೆಟಾಲಿಯನ್ ಮೈಸೂರು ಮತ್ತು ಮಾಧ್ಯಮಿಕ ಶಿಕ್ಷಕರ ಸಂಘದ ವತಿಯಿಂದ ಜುಲೈ 26ರಂದು ಕಾರ್ಗಿಲ್ ವಿಜಯೋತ್ಸವದ ರಜತ ಮಹೋತ್ಸವ ಸಂಭ್ರಮ,ರಕ್ತದಾನ ಹಾಗೂ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅನಿಕೇತನ ಸಂಸ್ಥಾಪಕ ಸಂಸ್ಥಾಪಕ ಕಾರ್ಯದರ್ಶಿ ಡಾ.ರಾಮಲಿಂಗಯ್ಯ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಾರಂಭದಲ್ಲಿ0 ಸಂಸ್ಥೆಯ ಸಿಬ್ಬಂದಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ರಕ್ತದಾನ ಮಾಡಲಿದ್ದಾರೆ. ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯ ಭಾಷಣ ಮಾಡಲಿದ್ದು, ಇದೇ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಆರ್ ಲೋಕೇಶ್ ಹಾಗೂ ಮತ್ತೊಬ್ಬ ನಿವೃತ್ತ ಯೋಧ ಸುಕುಮಾರ್ ಅವರನ್ನು ಗೌರವಿಸಲಾಗುವುದು ಎಂದರು.

ಶಂಭುಲಿಂಗೇಶ್ವರ ಎಜುಕೇಶನ್ ಟ್ರಸ್ಟ್ ಸ್ಥಾಪಿಸಿ ಬೆಳೆಸಿದ ಸಂಸ್ಥೆಯ ಸಂಸ್ಥಾಪಕ ಪಂಚಲಿಂಗೇಗೌಡ ಅವರಿಗೆ ಶಿಕ್ಷಣ ಚೇತನ, ಅತ್ಯುತ್ತಮ ಬೋಧಕ ಬಿ.ಎಂ ಚಂದ್ರಶೇಖರ್ ಅವರಿಗೆ ಶಿಕ್ಷಕ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಹಾಗೂ ಬಹುಮುಖ ಪ್ರತಿಭೆ ಪ್ರಣವಿ ಅಕ್ಷಯ್ ಅವರನ್ನು ಸನ್ಮಾನಿಸಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನಿಕೇತನ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಕೆ ಎಂ ಜಗದೀಶ್ ವಹಿಸಲಿದ್ದು ಕಾರ್ಯದರ್ಶಿ ಹೆಚ್ಎಸ್ ಚುಂಚೇಗೌಡ , ಎನ್ ಸಿ ಸಿ ಕಮಾಂಡಿಂಗ್ ಆಫೀಸರ್ ಕರ್ನಲ್ ಸಿದ್ದಾರ್ಥ ವತ್ಸಯನ್, ಆಡಳಿತಾಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಭಾಕರನ್, ಸುಬೇದಾರ್ ಮೇಜರ್ ಸಭಾಸ್ಟಿನ್ ಡೇನಿಯಲ್, ಮಾಧ್ಯಮಿಕ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷ ಸಂದೀಪ್ ಬೂದಿಹಾಳ ಭಾಗವಹಿಸಲಿದ್ದಾರೆ ಎಂದರು.

ಗೋಷ್ಟಿಯಲ್ಲಿ ಎನ್‌ಸಿಸಿ ಅಧಿಕಾರಿ ರಾಜು, ಸಾಹಿತಿ ಪುಟ್ಟೇಗೌಡ, ದೈಹಿಕ ಶಿಕ್ಷಣ ಶಿಕ್ಷಕ ಶಿವಕುಮಾರ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!