Friday, September 20, 2024

ಪ್ರಾಯೋಗಿಕ ಆವೃತ್ತಿ

ಕಾರ್ಗಿಲ್ ವಿಜಯ್ ದಿವಸ್ ಆಚರಣೆ

ಶ್ರೀರಂಗಪಟ್ಟಣ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಅಚೀವರ್ಸ್ ಅಕಾಡೆಮಿ ವತಿಯಿಂದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಮಾಡಲಾಯಿತು.

ಹಿರಿಯ ಗಾಂಧಿವಾದಿ ಹಾಗೂ ಖ್ಯಾತ ವೈದ್ಯರಾದ ಡಾ. ಸುಜಯ್ ಕುಮಾರ್ ಭಾರತಮಾತೆಗೆ ಪುಷ್ಪಾರ್ಚನೆ ಮಾಡುವ ಮುಖಾಂತರ ಕಾರ್ಯಕ್ರಮ ಉದ್ಘಾಟಿಸಿದರು.

ನಂತರ ಮಾತನಾಡಿದ ಡಾ. ಸುಜಯ್ ಕುಮಾರ್, ದೇಶ ಕಾಯುವ ಯೋಧರು ಹಗಲು-ರಾತ್ರಿ ವಿಶ್ರಾಂತಿ ಇಲ್ಲದೆ ರಾಷ್ಟ್ರವನ್ನು ರಕ್ಷಿಸುತ್ತಿದ್ದಾರೆ. ಹಾಗಾಗಿ ಎಲ್ಲಾ ವೀರ ಸೈನಿಕರಿಗೆ ನನ್ನ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದರು.

ಅಚೀವರ್ಸ್ ಅಕಾಡೆಮಿಯ ಮುಖ್ಯಸ್ಥ ಡಾ. ರಾಘವೇಂದ್ರ ಮಾತನಾಡಿ, ಕಾರ್ಗಿಲ್ ವಿಜಯ್ ದಿವಸ್ ಅನ್ನು ಪ್ರತಿ ವರ್ಷ ಜುಲೈ 26 ರಂದು ಪ್ರತಿಯೊಬ್ಬ ಭಾರತೀಯರು ಆಚರಿಸುತ್ತಿದ್ದು, 1999ರ ಕಾರ್ಗಿಲ್ ಯುದ್ಧದ ಹುತಾತ್ಮರಿಗೆ ಈ ದಿನವನ್ನು ಸಮರ್ಪಿಸಲಾಗಿದೆ. ಆಕ್ರಮಣಕಾರಿ ಶತ್ರುಗಳ ವಿರುದ್ಧ ವಿಜಯ ಸಾಧಿಸಲು ಮುಂಚೂಣಿಯಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರ ಸೈನಿಕರ ಜೀವನವನ್ನು ಗೌರವಿಸುವುದು ಪ್ರತಿಯೊಬ್ಬ ಭಾರತೀಯರ ಕರ್ತವ್ಯ ಎಂದರು.

ಇದಕ್ಕೂ ಮುನ್ನ ಕಾರ್ಗಿಲ್ ಯುದ್ಧದಲ್ಲಿ ಮಡಿದ ಎಲ್ಲಾ ವೀರ ಯೋಧರ ಆತ್ಮಕ್ಕೆ ಶಾಂತಿ ಕೋರಿ ಕೆಲ ಕಾಲ ಮೌನಚರಣೆ ಮಾಡಲಾಯಿತು.

ಇದೇ ವೇಳೆ ಯೋಧ ಪೆರುಮಾಳ್ ಅವರನ್ನು ಸನ್ಮಾನಿಸಲಾಯಿತು. ವಕೀಲ ಬಾಲರಾಜ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜ್ಞಾನಾನಂದ, ದೇವೇಂದ್ರ, ದೇವರಾಜ್, ಅನಿಲ್ ಕುಮಾರ್, ದೀಕ್ಷಿತ್, ಭಗತ್ ಸೂರ್ಯ ಸೇರಿದಂತೆ ಇತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!