Tuesday, September 17, 2024

ಪ್ರಾಯೋಗಿಕ ಆವೃತ್ತಿ

ರಾಜ್ಯ ಬಿಜೆಪಿಯ ‘ದಂಡ’ ನಾಯಕರು ಬೀದಿ ಪಾಲಾಗಿದ್ದಾರೆ! ; ಕಾಂಗ್ರೆಸ್

ರಾಜ್ಯ  ಬಿಜೆಪಿ  ನಾಯಕರದ್ದು ಎಂತಹಾ ದುಸ್ಥಿತಿ.. ರಾಜ್ಯ ಬಿಜೆಪಿಯ ‘ದಂಡ’ ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ! ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ! ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ? ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿನ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಸ್ವಾಗತಿಸಲು ರಸ್ತೆಬದಿಯಲ್ಲಿ ನಿಂತು ಜನ ಸಾಮಾನ್ಯರಂತೆ ನಿಂತಿರುವ ಪೋಟೋವನ್ನು X ನಲ್ಲಿ ಪೋಸ್ಟ್ ಮಾಡಿ ರಾಜ್ಯ ಬಿಜೆಪಿ ನಾಯಕರಿಗೆ ಇಂತಹ ಸ್ಥಿತಿ ಬರಬಾರದಿತ್ತು ಎಂದು ವ್ಯಂಗ್ಯವಾಡಿದೆ.

“>

ರಾಜ್ಯದ ಬಿಜೆಪಿ ನಾಯಕರಿಗೆ ಹೈಕಮಾಂಡ್ ನಾಯಕರು ಕನಿಷ್ಠ ಪ್ರಾಮುಖ್ಯತೆಯನ್ನೂ ಕೊಡುತ್ತಿಲ್ಲ. ಮೋದಿಯ ಕೋಪ ತಣ್ಣಗಾಗುವವರೆಗೆ ವಿರೋಧ ಪಕ್ಷದ ನಾಯಕನ ಆಯ್ಕೆ ಆಗುವುದಿಲ್ಲ, ಮೋದಿ ಕೋಪ ತಣ್ಣಗಾಗುವುದೂ ಇಲ್ಲ! ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷ ನೇಮಕ ಆಗುವುದೂ ಅನುಮಾನ, ಹಾಲಿ ಅಧ್ಯಕ್ಷ ಬೀದಿ ಪಾಲಾಗಿದ್ದಾರೆ!. ರಾಜ್ಯ ಬಿಜೆಪಿ ಅಬ್ಬೇಪಾರಿಯಾಗಿದೆ ಎಂಬುದಕ್ಕೆ ಈ ಚಿತ್ರವೇ ಸಾಕ್ಷಿ ಎಂದು ಕಾಂಗ್ರೆಸ್ X (ಟ್ವಿಟರ್)ನಲ್ಲಿ ಪ್ರತಿಕ್ರಿಯಿಸಿದೆ.

ಬಿಜೆಪಿಯ ರಾಜ್ಯಾಧ್ಯಕ್ಷ, ಮಾಜಿ ಸಚಿವರುಗಳು, ಹಾಲಿ ಶಾಸಕರುಗಳು, ಹೀಗೆ ಬೀದಿಪಾಲಾಗಿದ್ದಾರೆ ಎಂದರೆ “ಸರ್ವಾಧಿಕಾರಿ”ಯ ಮೊದಲ ಬಲಿಪಶುಗಳು ಬಿಜೆಪಿಗರಿಗೇ ಅಲ್ಲವೇ? ಆತ್ಮ ಗೌರವ, ಸ್ವಾಭಿಮಾನವಿಲ್ಲದೆ ಕೈಬೀಸುತ್ತಿದ್ದಾರೆ ಎಂದರೆ ಗುಲಾಮಗಿರಿಯ ಪರಮಾವಧಿಗೆ ತಲುಪಿದ್ದಾರೆ ಎಂದರ್ಥವಲ್ಲವೇ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಮೋದಿ ಸ್ವಾಗತಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಮಾಜಿ ಸಚಿವರಾದ ಗೋಪಾಲಯ್ಯ, ಮುನಿರತ್ನ ಮತ್ತಿತರರು ರಸ್ತೆ ಬದಿಯಲ್ಲಿ ನಿಂತಿರುವುದನ್ನು ಚಿತ್ರದಲ್ಲಿ ಕಾಣಬಹುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!