Friday, November 20, 2026

ಪ್ರಾಯೋಗಿಕ ಆವೃತ್ತಿ

ಕರ್ನಾಟಕ ಸಂಭ್ರಮ- 50| ಐದು ಕನ್ನಡ ಗೀತೆಗಳ ಗಾಯನ ಕಡ್ಡಾಯ: ಸರ್ಕಾರದ ಆದೇಶ

ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸರ್ಕಾರದ ವತಿಯಿಂದ ಆಚರಿಸಲಾಗುವ ರಾಜ್ಯೋತ್ಸವದ ವೇಳೆ ಐದು ಕನ್ನಡ ಗೀತೆಗಳನ್ನು ಹಾಡುವುದನ್ನು ಕಡ್ಡಾಯಗೊಳಿಸಿದೆ.

  1. ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು – ಹುಯಿಳಗೋಳ ನಾರಾಯಣ ರಾಯರು
  2. ಎಲ್ಲಾದರೂ ಇರು ಎಂತಾದರು ಇರು – ಕುವೆಂಪು
  3. ಒಂದೇ ಒಂದೇ ಕರ್ನಾಟಕ ಒಂದೇ – ದ.ರಾ. ಬೇಂದ್ರೆ
  4. ಹೊತ್ತಿತೋ ಹೊತ್ತಿತು ಕನ್ನಡ ದೀಪ – ಸಿದ್ದಯ್ಯ ಪುರಾಣಿಕ
  5. ಹೆಸರಾಯಿತು ಕರ್ನಾಟಕ – ಚನ್ನವೀರ ಕಣವಿ ಅವರ ಎಂಬ ಐದು ಕನ್ನಡ ಹಾಡುಗಳನ್ನು ಹಾಡುವಂತೆ ಸರ್ಕಾರ ಆದೇಶಿಸಿದೆ.

ಆದೇಶದಲ್ಲಿ, ನವೆಂಬರ್ ಒಂದರಂದು ರಾಜ್ಯದ ಎಲ್ಲೆಡೆ ಆಚರಿಸುವ ರಾಜೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ 50 ಅಭಿಯಾನದ ಅಂಗವಾಗಿ ಆಯ್ಕೆ ಮಾಡಿರುವ ನಾಡಿನ ಹೆಸರಾಂತ ಕವಿಗಳ ಐದು ಕನ್ನಡ ಗೀತೆಗಳನ್ನು ಹಾಡುವ ಮೂಲಕ ಎಲ್ಲ ಕನ್ನಡಿಗರು ಕನ್ನಡಾಂಬೆಗೆ ನುಡಿ ನಮನ (ಗೀತ ಗಾಯನ) ಸಲ್ಲಿಸುವುದು ಸರ್ಕಾರದ ಉದ್ದೇಶವಾಗಿರುತ್ತದೆ ಎಂದು ತಿಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರು 2023-24ನೇ ಸಾಲಿನ ಆಯವ್ಯಯದಲ್ಲಿ “ಮೈಸೂರು ರಾಜ್ಯವು ಕರ್ನಾಟಕ ಎಂದು ಮರು ನಾಮಕರಣವಾಗಿ 1ನೇ ನವೆಂಬರ್ 2023ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ’ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಮತ್ತು ಯುವ ಜನತೆಯಲ್ಲಿ ಕನ್ನಡ ಕನ್ನಡಿಗ ಕರ್ನಾಟಕದ ಅರಿವು ಮೂಡಿಸುವ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ಘೋಷಣೆ ಮಾಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ