Tuesday, September 17, 2024

ಪ್ರಾಯೋಗಿಕ ಆವೃತ್ತಿ

ಕರ್ನಾಟಕ ಚುನಾವಣೆ 2023: ಮೊದಲ ಪಟ್ಟಿಯಲ್ಲಿ 189 ಅಭ್ಯರ್ಥಿಗಳನ್ನು ಘೋಷಿಸಿದ ಬಿಜೆಪಿ, 52 ಹೊಸ ನಾಯಕರಿಗೆ ಟಿಕೆಟ್

ಹಲವು ದಿನಗಳ ತೀವ್ರ ಚರ್ಚೆಯ ನಂತರ ಬಿಜೆಪಿ ಮಂಗಳವಾರ ಅಂತಿಮವಾಗಿ ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳ ಆಯ್ಕೆಯಲ್ಲಿ ಯುವ ನಾಯಕತ್ವಕ್ಕೆ ಆದ್ಯತೆ ನೀಡಲಾಗಿದೆ ಎಂದು ರಾಜ್ಯ ಚುನಾವಣಾ ಉಸ್ತುವಾರಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ.

ಬಿಜೆಪಿ ಮುಖ್ಯಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿ ಆನಂತರ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಯಿತು. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗಿದೆ. ಉಳಿದಂತೆ 35 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಕಾಯ್ದಿರಿಸಿದೆ.

ಹೊಸ ಮುಖಗಳಲ್ಲದೆ, 32 ಅಭ್ಯರ್ಥಿಗಳು ಒಬಿಸಿ, 30 ಎಸ್‌ಸಿ ಮತ್ತು 16 ಎಸ್‌ಟಿ. ಮೊದಲ ಪಟ್ಟಿಯಲ್ಲಿ 8 ಮಹಿಳೆಯರಿದ್ದಾರೆ, ಎಂದು ಸಿಂಗ್ ಹೇಳಿದ್ದಾರೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿಯು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ತಮ್ಮ ಸಾಂಪ್ರದಾಯಿಕ ಶಿಗ್ಗಾಂವ್ ಕ್ಷೇತ್ರದಿಂದ ಕಣಕ್ಕಿಳಿಸಿದೆ.

ಕರ್ನಾಟಕದ ಮಾಜಿ ಸಿಎಂ, ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಅವರು ತಮ್ಮ ಸಾಂಪ್ರದಾಯಿಕ ಚಿಕ್ಕಮಗಳೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ

ಪದ್ಮನಾಭನಗರ ಮತ್ತು ಕನಕಪುರ 2 ಸ್ಥಾನಗಳಲ್ಲಿ ರಾಜ್ಯ ಸಚಿವ ಆರ್ ಅಶೋಕ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್ ಕನಕಪುರದಿಂದ ಕಣಕ್ಕಿಳಿಯಲಿದ್ದಾರೆ.

ವರುಣಾದಲ್ಲಿ ಕಾಂಗ್ರೆಸ್‌ನ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ವಿ ಸೋಮಣ್ಣ ಕಣಕ್ಕಿಳಿಯಲಿದ್ದಾರೆ. ಸೋಮಣ್ಣ ಚಾಮರಾಜನಗರದಿಂದಲೂ ಕೂಡಾ ಕಣಕ್ಕಿಳಿಯಲಿದ್ದಾರೆ.

ಬೊಮ್ಮಾಯಿ ಪಟ್ಟಿಯನ್ನು ಪ್ರಕಟಿಸುವ ಮೊದಲು, ಹೊಸ ವ್ಯವಸ್ಥೆಯನ್ನು ರಚಿಸಲು ಪಕ್ಷವು “ಕಠಿಣ” ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಬೊಮ್ಮಾಯಿ ಪ್ರತಿಪಾದಿಸಿದರು.ಮುಂದಿನ ದಿನಗಳಲ್ಲಿ ಎರಡನೇ ಹಾಗೂ ಅಂತಿಮ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದರು.

ಕರ್ನಾಟಕದಲ್ಲಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಮರಳುವ ಗುರಿ ಹೊಂದಿರುವ ಬಿಜೆಪಿ, ವಿಧಾನಸಭೆಯ ಒಟ್ಟು 224 ಸ್ಥಾನಗಳಲ್ಲಿ ಕನಿಷ್ಠ 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ.

ಏಪ್ರಿಲ್ 9 ರಂದು ನಡೆದ ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಸಭೆಯ ನಂತರ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯ ನಾಯಕರೊಂದಿಗೆ ಎರಡನೇ ಸುತ್ತಿನ ಸಮಾಲೋಚನೆ ನಡೆಸಿದರು.

ಪಕ್ಷದ ಹಿರಿಯ ನಾಯಕ ಕೆ ಎಸ್ ಈಶ್ವರಪ್ಪ ಅವರು ಚುನಾವಣೆಗೆ ಸ್ಪರ್ಧಿಸದಿರುವ ನಿರ್ಧಾರವನ್ನು ಉಲ್ಲೇಖಿಸಿದ ಬೊಮ್ಮಾಯಿ, ಇದು ಕಿರಿಯರಿಗೆ ದಾರಿ ಮಾಡಿಕೊಡುವ ಬಿಜೆಪಿಯ ಅನುಭವಿ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು ಮತ್ತು 91 ವರ್ಷದ ಶಾಮನೂರು ಶಿವಶಂಕರಪ್ಪಗೆ ಟಿಕೆಟ್ ನೀಡಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ನಮ್ಮ ನಾಯಕತ್ವ ಮತ್ತು ಮೌಲ್ಯಗಳು ವಿಭಿನ್ನವಾಗಿವೆ. ಹೊಸ ವ್ಯವಸ್ಥೆ ರಚಿಸಲು ನಾವು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದೇವೆ,’’ ಎಂದರು.

ಚುನಾವಣೆಯಿಂದ ಹೊರಗುಳಿಯುವುದು ಈಶ್ವರಪ್ಪ ಅವರ ವೈಯಕ್ತಿಕ ನಿರ್ಧಾರ ಎಂದು ಅವರು ಹೇಳಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!