Friday, November 20, 2026

ಪ್ರಾಯೋಗಿಕ ಆವೃತ್ತಿ

ಕರ್ನಾಟಕ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ: ಹೆಚ್.ಡಿ.ಜಯರಾಂ

ನಾಳೆ ಮಾ.22ರಂದು ಅಖಂಡ ಕರ್ನಾಟಕ ಬಂದ್‌ಗೆ ವಾಟಾಳ್ ನಾಗರಾಜು ಹಾಗೂ ಕರವೇ ರಾಜ್ಯಾಧ್ಯಕ್ಷರಾದ ಹೆಚ್.ಶಿವರಾಮೇಗೌಡ ಸೇರಿದಂತೆ ನೂರಾರು ಕನ್ನಡಪರ ಮನಸ್ಸುಗಳ ನೇತೃತ್ವದಲ್ಲಿ 2000ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು ಹಲವು ಬೇಡಿಕೆ ಈಡೇರಿಕೆಗೆ ಕರೆ ನೀಡಿದ್ದು, ಜಿಲ್ಲೆಯ ಸಮಸ್ತ ಸಾರ್ವಜನಿಕರು, ವರ್ತಕರು ಬೆಂಬಲ ನೀಡಬೇಕೆಂದು ಕರವೇ ಜಿಲ್ಲಾಧ್ಯಕ್ಷ ಹೆಚ್.ಡಿ.ಜಯರಾಮ್ ಮನವಿ ಮಾಡಿದರು.

ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕ ಬಂದ್ ಮೂಲಕ ರಾಜ್ಯದ ಪರವಾಗಿ ಆಗಬೇಕಾದ ವಿಷಯಗಳ ಕುರಿತು 17ಕ್ಕೂ ಹೆಚ್ಚು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಹೇಳಿದರು.

ಬೆಳಗಾವಿಯಲ್ಲಿ ಎಂಇಎಸ್ ಸಂಘಟನೆಯ ಪುಂಡರು ಪದೇ ಪದೇ ಕನ್ನಡಿಗರ ಮೇಲೆ ಹಲ್ಲೆ ಮಾಡುತ್ತಿದ್ದು, ರಾಜ್ಯದಲ್ಲಿ ಎಂ.ಇ.ಎಸ್ ಸಂಘಟನೆ ನಿಷೇಧ ಮಾಡಬೇಕು. ಬೆಂಗಳೂರಿಗೆ ಕುಡಿಯುವ ನೀರಿನ ಹೆಸರಲ್ಲಿ ೬ನೇ ಹಂತದ ಯೋಜನೆ ಮೂಲಕ ರೈತರ ಒಂದು ಬೆಳೆಯ ನೀರನ್ನು ನೀಡಿ ರೈತರನನು ಬೀದಿಗೆ ತಳ್ಳುವ ಯೋಜನೆ ಕೈ ಬಿಡುಬೇಕು, ಡಾ.ಸರೋಜಿನಿ ಮಹಿಷಿ ವರದಿ ಜಾರಿ, ಮೇಕೆದಾಟು ಯೋಜನೆ ಪ್ರಾರಂಭ, ಮಹಾದಾಯಿ ಕಳಸ ಬಂಡೂರಿ ಕಾರ್ಯಗತಗೊಳಿಸುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಾಗುವುದು ಎಂದರು.

ಬಂದ್‌ಗೆ ಜಿಲ್ಲೆಯ ಎಲ್ಲಾ ಸಾಗರೀಕರು, ವರ್ತಕರು, ಬೇಕರಿ ಮಾಲೀಕರು, ಆಟೋ ಚಾಲಕರು, ಬೀದಿ ಬದಿ ವ್ಯಾಪಾರಿಗಳು, ಲಾರಿ ಮಾಲೀಕರು, ಚಿನ್ನ ಮತ್ತು ಬೆಳ್ಳಿ ವರ್ಗಕರು, ಎಲ್ಲಾ ಪಕ್ಷದ, ಸಂಘಟನೆಗಳ ನಾಯಕರು ಸಹಕಾರ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ