Sunday, November 22, 2026

ಪ್ರಾಯೋಗಿಕ ಆವೃತ್ತಿ

4 ಲೇಬರ್ ಕೋಡ್ ಜಾರಿಗೆ ವಿರೋಧ | ಮೇ 31ರಂದು ಮಂಡ್ಯದಲ್ಲಿ ಪ್ರತಿರೋಧದ ಕಾರ್ಮಿಕ ದಿನಾಚರಣೆ

ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ ಜಾರಿ ವಿರೋಧಿಸಿ, ಕೆಲಸದ ಅವಧಿ ೮ ರಿಂದ ೧೨ ಗಂಟೆಗಳಿಗೆ ಹೆಚ್ಚಿಸಿರುವುದನ್ನು ಹಿಂಪಡೆಯಲು ಆಗ್ರಹಿಸುವ ಹೋರಾಟದ ಭಾಗವಾಗಿ ಹಾಗೂ ಪ್ರತಿರೋಧ ದಿನವಾಗಿ ಮೇ ೩೧ರಂದು ಕಾರ್ಮಿಕ ದಿನಾಚರಣೆಯನ್ನು ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಬೆಳಿಗ್ಗೆ ೧೦.೩೦ಕ್ಕೆ ಆಯೋಜಿಸಲಾಗಿದೆ ಎಂದು ಕರ್ನಾಟಕ ಶ್ರಮಿಕ ಶಕ್ತಿ ರಾಜ್ಯಾಧ್ಯಕ್ಷ ವರದರಾಜೇಂದ್ರ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಮಿಕರ ಬೇಡಿಕೆಗಳನ್ನು ತಿರಸ್ಕರಿಸಿದ ಕೇಂದ್ರ ಸರ್ಕಾರವು ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳ ಜಾರಿಗೊಳಿಸಿ, ಅವುಗಳಲ್ಲಿ 29 ಕಾನೂನುಗಳನ್ನು ರೂಪಿಸಿರುವುದನ್ನು ವಿರೋಧಿಸಿ ಚರ್ಚೆ ನಡೆಸಲು ಉದ್ದೇಶಿಸಿ ಕಾರ್ಯಕ್ರಮ ರೂಪಿಸಲಾಗಿದೆ ಎಂದರು.

  • ಹಕ್ಕೊತ್ತಾಯಗಳೇನು ?
  • 1. 8 ಗಂಟೆ ಕೆಲಸದ ಅವಧಿ, ಖಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸುರಕ್ಷತೆ, ಮುಷ್ಕರದ ಹಕ್ಕು, ಸಂಘ ಕಟ್ಟುವ ಹಕ್ಕು, ಇನ್ನಿತರ ಹಕ್ಕುಗಳನ್ನು ಇಲ್ಲವಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸಲು ಕೇಂದ್ರ ಸರ್ಕಾರ ಕಾರ್ಪೊರೇಟ್ ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದುಪಡಿಸಬೇಕು.
  • 2. ಗುತ್ತಿಗೆ, ಹೊರ ಗುತ್ತಿಗೆ, ನಿಗದಿತ ಅವಧಿಯ ಉದ್ಯೋಗ, ಅಪ್ರೆಂಟಿಸ್, ಟೈನಿ, ನ್ಯಾಪ್ಸ್ ಮುಂತಾದ ಹೆಸರಿನಲ್ಲಿ ಕಾರ್ಮಿಕರ ನೇಮಕ ನಿಲ್ಲಿಸಬೇಕು. ಗುತ್ತಿಗೆ, ಮುಂತಾದ ಕಾರ್ಮಿಕರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ತಕ್ಷಣ ಜಾರಿ ಮಾಡಬೇಕು.
  • 3. ಇಎಸ್‌ಐ, ಪಿ.ಎಫ್, ಪಾವತಿಗಿರುವ ಎಲ್ಲಾ ವೇತನ ಮಿತಿಯನ್ನು ತೆಗೆಯಬೇಕು.
  • 4.ಅರ್ಜಿ ಸಲ್ಲಿಸಿದ 45 ದಿನಗಳೊಳಗೆ ಕಾರ್ಮಿಕ ಸಂಘಗಳ ಕಡ್ಡಾಯ ನೊಂದಣಿ ಹಾಗು ಮಾನ್ಯತೆ ನೀಡಬೇಕೆಂಬ ILO ಸಮಾವೇಶದ ನಿರ್ಣಯಗಳನ್ನು ಕೇಂದ್ರ ಸರ್ಕಾರ ಅನುಮೋದಿಸಬೇಕು.
  • 5. ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಸಾರ್ವತ್ರಿಕರಣಗೊಳಿಸಿ ಆಹಾರ ಭದ್ರತೆಯನ್ನು ಖಾತ್ರಿಪಡಿಸಬೇಕು.
    6. ಉದ್ಯೋಗದ ಹಕ್ಕನ್ನು ಮೂಲಭೂತ ಹಕ್ಕಾಗಿಸಬೇಕು.
  • 7. ಎಲ್ಲರಿಗೂ ಉಚಿತ ಶಿಕ್ಷಣದ ಹಕ್ಕು, ಆರೋಗ್ಯದ ಹಕ್ಕು, ನೀರು ಮತ್ತು ನೈರ್ಮಲ್ಯದ ಹಕ್ಕು ಹಾಗೂ ಎಲ್ಲರಿಗೂ ವಸತಿ ಖಾತ್ರಿಪಡಿಸಬೇಕು. ನೂತನ ಶಿಕ್ಷಣ ನೀತಿ-2020ನ್ನು ರದ್ದುಪಡಿಸಬೇಕು.
  • 8. ಇ-ಶ್ರಮ್ ಪೋರ್ಟಲ್‌ನಲ್ಲಿ ನೊಂದಾಯಿಸಿದ ಎಲ್ಲಾ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಯೋಜನೆಗಳು, ಹೆರಿಗೆ ಸೌಲಭ್ಯಗಳು, ಜೀವ ಮತ್ತು ಅಂಗವೈಕಲ್ಯ ವಿಮೆ ನೀಡಬೇಕು ಹಾಗೂ ಇಎಸ್‌ಐ ಸೌಲಭ್ಯ ಸೇರಿದಂತೆ ಸಾಮಾಜಿಕ ಸುರಕ್ಷತೆ ಒದಗಿಸಬೇಕು. ಕಲ್ಯಾಣ ಮಂಡಳಿಗಳಿಗೆ ಬಜೆಟ್‌ ನಲ್ಲಿ ಅನುದಾನ ನೀಡಬೇಕು.
  • 9. ದಿನದ ಕೆಲಸದ ನೀಡಿ ಅವಧಿ 12 ಗಂಟೆಗೆ ವಿಸ್ತರಣೆ ಹಾಗೂ ರಾತ್ರಿ ಪಾಳಿಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ ಕಾರ್ಖಾನೆ ಕಾಯ್ದೆಗೆ ಮಾಡಿರುವ ತಿದ್ದುಪಡಿ ಹಾಗೂ ನಿಶ್ಚಿತ ಕಾಲಾವಧಿ ಕಾರ್ಮಿಕ (FTE) ನೇಮಕಕ್ಕೆ ಅವಕಾಶ ನೀಡುವ ಮಾದರಿ ಸ್ಥಾಯಿ ಆದೇಶಗಳ ತಿದ್ದುಪಡಿಗಳನ್ನು ರಾಜ್ಯ ಸರ್ಕಾರ ವಾಪಸ್ಸು ಪಡೆಯಬೇಕು. 10.ಕನಿಷ್ಟ ಕೂಲಿ ಮಾಸಿಕ 35,000 ರೂ. ನೀಡಬೇಕು.

ಗೋಷ್ಠಿಯಲ್ಲಿ ಮಹಿಳಾ ಮುನ್ನಡೆ ಸಂಚಾಲಕಿ ಪೂರ್ಣಿಮ, ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು, ಕೃಷ್ಣಪ್ಪ, ದೇವರಾಜ್, ಮೂರ್ತಿ, ಪುಟ್ಟಸ್ವಾಮಿ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ