Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಕಾವೇರಿ ಹೋರಾಟದಲ್ಲಿ ಪಾಲ್ಗೊಂಡ ಜೆಡಿಎಸ್ ನಾಯಕರು

ಮಂಡ್ಯದಲ್ಲಿ ಕಾವೇರಿ ನೀರು ತಮಿಳುನಾಡಿಗೆ ಹರಿಸಬಾರದೆಂದು ನಡೆಸುತ್ತಿರುವ ರೈತ ಹಿತರಕ್ಷಣಾ ಸಮಿತಿ ಪ್ರತಿಭಟನೆಗೆ ಜೆಡಿಎಸ್ ಮುಖಂಡರು ಸಾಥ್ ನೀಡಿದರು.

ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಬಾಗ ನಡೆಸುತ್ತಿರುವ ಧರಣಿಯಲ್ಲಿ ಜೆಡಿಎಸ್ ಮುಖಂಡರು ಭಾಗಿಯಾಗಿ ಬೆಂಬಲ ನೀಡಿದರು.

ಜೆಡಿಎಸ್ ಶಾಸಕ ಎಚ್.ಟಿ.ಮಂಜು, ಮಾಜಿ ಶಾಸಕರಾದ ಸುರೇಶ್ ಗೌಡ, ಅನ್ನದಾನಿ, ಕೆ.ಟಿ.ಶ್ರೀಕಂಠೇಗೌಡ, ಜಿ.ಬಿ.ಶಿವಕುಮಾರ್ ಮತ್ತಿತರರು ಭಾಗಿಯಾಗಿ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ನಾಯಕರು, ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಕಿಡಿ ಕಾರಿದರು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿದರು.

ಒಂದು ವೇಳೆ ಕಾಂಗ್ರೆಸ್ ಸರ್ಕಾರ ತಮಿಳುನಾಡಿಗೆ ನೀರು ಹರಿಸಬಾರದೆಂಬ ತನ್ನ ನಿಲುವಿನಲ್ಲಿ ಬದಲಾವಣೆ ಮಾಡಿಕೊಂಡರೆ,ಜಿಲ್ಲೆಯ ರೈತರು ಹಾಗೂ ಕುಡಿಯುವ ನೀರಿನ ರಕ್ಷಣೆಗಾಗಿ ಜೆಡಿಎಸ್ ಪಕ್ಷ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!