Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ಮಾತೆಗೆ ಗಂಗಾರತಿ ಸಲ್ಲಿಸಿದ ಡಿಸಿ ಅಶ್ವತಿ

ಶ್ರೀರಂಗಪಟ್ಟಣ ದಸರಾ ಮಹೋತ್ಸವ ಅಂಗವಾಗಿ ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಜಿಲ್ಲಾಧಿಕಾರಿ ಎಸ್.ಅಶ್ವತಿಯವರು ಕಾವೇರಿ ಮಾತೆಗೆ ಗಂಗಾರತಿ ಸಲ್ಲಿಸಿದರು.

ಜಿಲ್ಲೆಯ ಅಭಿವೃದ್ಧಿಗೆ ಮತ್ತು ಜನರ ಸಂತೋಷದಿಂದ ಬದುಕು ನಡೆಸಲಿ ಎಂದು ಪ್ರಾರ್ಥಿಸಿದರು.

ಜಿಲ್ಲಾಧಿಕಾರಿಗಳೊಂದಿಗೆ 500 ಕ್ಕೂ ಹೆಚ್ಚು ಮಹಿಳೆಯರು‌ ಗಂಗಾರತಿ ಸಲ್ಲಿಸಿದರು.

ಇದೇ ಸಂದರ್ಭದಲ್ಲಿ ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ, ಶ್ರೀರಂಗಪಟ್ಟಣದ ತಹಶೀಲ್ದಾರ್ ಶ್ವೇತಾ ಎನ್. ರವೀಂದ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ನಾಗರಾಜು ಹಾಗೂ ಡಾ. ಭಾನು ಪ್ರಕಾಶ್ ಸ್ವಾಮೀಜಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!