ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ವಿಚಾರಣೆ ಮೂಂದೂಡಿರುವ ಹಿನ್ನಲೆ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರೊಂದಿಗೆ ಚರ್ಚಿಸಿ ಸಂಕಷ್ಟ ಪರಿಸ್ಥಿತಿಯಲ್ಲಿರುವ ರೈತರ ಹಿತ ಕಾಯವುದು ಹಾಗೂ ಮುಂದಿನ ನಡೆಗಳ ನಿರ್ಧಾರ ಕೈಗೊಳ್ಳುವ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ನಾಗಮಂಗಲ ಜಲಸೂರು ರಸ್ತೆ ಕಾಮಗಾರಿ ವೀಕ್ಷಣೆ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂದು ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಪರ ಆದೇಶ ಬರೋ ಆಶಾ ಭಾವನೆ ಇತ್ತು, ಸುಪ್ರೀಂಕೋರ್ಟ್ ವಿಚಾರಣೆ ಯನ್ನು ಸೆಪ್ಟೆಂಬರ್ 21ಕ್ಕೆ ಮುಂದೂಡಿರೋ ಹಿನ್ನಲೆ ಅಲ್ಲಿಯವರೆಗೂ ತಮಿಳುನಾಡಿಗೆ ನೀರು ಬಿಡಲು ಕಷ್ಟವಾಗುತ್ತದೆ ಎಂದರು.
ಈ ಹಿನ್ನಲೆ ಕಾವೇರಿ ನದಿ ನೀರು ಪ್ರಾಧಿಕಾರದ ಮುಂದೆ ರಾಜ್ಯದ ಸಂಕಷ್ಟ ಪರಿಸ್ಥಿತಿಯನ್ನು ವಿವರಿಸುವ ಪ್ರಯತ್ನವನ್ನು ಮತ್ತೆ ನಮ್ಮ ರಾಜ್ಯದ ಪರ ವಕೀಲರ ಮೂಲಕ ಮುಂದೂವರೆಸುವುದಾಗಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು.
ಕೆಆರ್ ಎಸ್ ಅಣೆಕಟ್ಟಿನಲ್ಲಿ ಸದ್ಯ ಸಂಗ್ರಹವಾಗಿರುವ ನೀರು ಕುಡಿಯೋದಕ್ಕೆ ಮಾತ್ರ ಲಭ್ಯವಾಗಿದ್ದು, ರೈತರ ಬೆಳೆಗಳಿಗೂ ನೀರು ಬಿಡದ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನಲೆ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯ ತಲುಪಿದ್ದು, ಈ ಬಗ್ಗೆ ಪ್ರಾಧಿಕಾರದ ಗಮನ ಸೆಳೆಯುವ ಪ್ರಯತ್ನ ಮುಂದುವರೆಸುವುದಾಗಿ ಸಚಿವರು ತಿಳಿಸಿದರು.