Monday, November 23, 2026

ಪ್ರಾಯೋಗಿಕ ಆವೃತ್ತಿ

ಕಾವೇರಿ ಹೋರಾಟ ಬೆಂಬಲಿಸಲು ನಾಳೆ ಮಂಡ್ಯ ಕ್ಕೆ ಹೆಚ್ಡಿಕೆ

ತಮಿಳುನಾಡಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಕಾವೇರಿ ನೀರು ಹರಿಸುತ್ತಿರುವುದನ್ನು ಪ್ರತಿಭಟಿಸಿ ಮಂಡ್ಯ ಜಿಲ್ಲೆಯ ಜನರು ನಡೆಸುತ್ತಿರುವ ಬಂದ್ ಗೆ ತಮ್ಮ ಬೆಂಬಲವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ನವದೆಹಲಿಯಿಂದಲೇ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ಶನಿವಾರ ಬೆಳಗ್ಗೆ ದೆಹಲಿಯಿಂದ ಬೆಂಗಳೂರಿಗೆ ತಾವು ವಾಪಸ್ಸಾಗಲಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೇ ನೇರವಾಗಿ ಮಂಡ್ಯಕ್ಕೆ ತೆರಳುವುದಾಗಿ ಹೇಳಿದ್ದಾರೆ.

ಸರ್ಕಾರದ ತಪ್ಪಿನಿಂದ ರಾಜ್ಯದ ಜನರು ದೊಡ್ಡ ಪ್ರಮಾಣದ ಜಲ ಸಂಕಷ್ಟಕ್ಕೆ ತುತ್ತಾಗಲಿದ್ದಾರೆ. ಈಗಾಗಲೇ ಭೀಕರ ಜಲಕ್ಷಾಮದ ಎಲ್ಲಾ ಲಕ್ಷಣಗಳು ಗೋಚರವಾಗುತ್ತಿವೆ. ಆದರೂ ಸರಕಾರ ನಿರ್ಲಕ್ಷ್ಯ ಧೋರಣೆ ತಾಳಿದೆ. ಹೀಗಾಗಿ ಜನರು ಹೋರಾಟಕ್ಕೆ ಮುಂದಾಗಿದ್ದಾರೆ. ಜನರ ಜತೆ ನಿಲ್ಲುವುದು ನನ್ನ ಕರ್ತವ್ಯ. ಹೀಗಾಗಿ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದು ಅವರು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ