Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ – ಕೆ.ಬಿ.ಚಂದ್ರಶೇಖರ್

ಕಾಂಗ್ರೆಸ್ ಪಕ್ಷವು ಕನಿಷ್ಟ 130 ಸೀಟುಗಳನ್ನು ಪಡೆದು ಅಧಿಕಾರಕ್ಕೆ ಬರುವುದು ಖಚಿತವಾಗಿದೆ. ಮೇ 13ರ ನಂತರ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಗಳು ಜಾರಿಗೆ ಬರಲಿದ್ದು, ಜನತೆಗೆ ಒಳ್ಳೆಯ ದಿನಗಳು ಬರಲಿವೆ  ಎಂದು ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್ ಹೇಳಿದರು.

ಕೆ.ಆರ್.ಪೇಟೆ ತಾಲ್ಲೂಕಿನ ಮರಟೀಕೊಪ್ಪಲು, ವರಹನಾಥ ಕಲ್ಲಹಳ್ಳಿ, ಪೂವನಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ಎಲ್.ದೇವರಾಜು ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.

ಸರಳ ಸಜ್ಜನ ರಾಜಕಾರಣಿ ಬಿ.ಎಲ್. ದೇವರಾಜು ಗೆಲ್ಲುವುದು ಸೂರ್ಯ ಉದಯಿಸಿದಷ್ಟೇ ಸತ್ಯವಾಗಿದೆ. ಜೆಡಿಎಸ್ ಮತ್ತು ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಗಳಿಗಿಂತ ಅತ್ಯುತ್ತಮ ಅಭ್ಯರ್ಥಿಗಳಾಗಿದ್ದಾರೆ. ಇದನ್ನು ಜನತೆ ಕ್ಷೇತ್ರದಾದ್ಯಂತ ಮಾತನಾಡುತ್ತಿದ್ದಾರೆ ಎಂದರು.

ಬಿ.ಎಲ್.ದೇವರಾಜು ಅವರಿಗೆ ಇದೇ ಕಡೆ ಚುನಾವಣೆಯಾಗಿದೆ. ಎರಡು ಭಾರಿ ಸೋತಿದ್ದು ಅನುಕಂಪದ ಅಲೆಯು ತಾಲ್ಲೂಕಿನಾದ್ಯಂತ ಕಂಡು ಬರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಲೆ ಇರುವ ಕಾರಣ ಬಿ.ಎಲ್.ದೇವರಾಜು ಅವರು ಕನಿಷ್ಟ 25ಸಾವಿರ ಮತಗಳ ಅಂತರದಿಂದ ವಿಜಯ ಸಾಧಿಸುವುದು ಖಚಿತವಾಗಿದೆ ಆದರೂ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಮೈಮರೆಯದೇ ಇನ್ನೂ ಹೆಚ್ಚಿನ ಲೀಡ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಶ್ರಮಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಬಿ.ಪ್ರಕಾಶ್, ಕಾಂಗ್ರೆಸ್ ಮುಖಂಡರಾದ ವಿಜಯ್ ರಾಮೇಗೌಡ, ಎಂ.ಡಿ.ಕೃಷ್ಣಮೂರ್ತಿ, ಬಸ್ತಿ ರಂಗಪ್ಪ, ಕೃಷ್ಣಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಬಿ.ನಾಗೇಂದ್ರಕುಮಾರ್, ಜಿ.ಪಂ.ಸದಸ್ಯ ಕೋಡಿ ಮಾರನಹಳ್ಳಿ ದೇವರಾಜು, ತಾಲ್ಲೂಕು ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಸಾಸಲು ಈರಪ್ಪ, ಲಕ್ಷ್ಮೀಪುರ ಚಂದ್ರೇಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಪ್ರತಿಮಾ, ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಬಿ.ಚೇತನ್‌ಕುಮಾರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಎನ್.ದಿವಾಕರ್, ಎಂ.ಜೆ.ಶಶಿಧರ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಬಳ್ಳೇಕೆರೆ ಸುರೇಶ್, ಪೂವನಹಳ್ಳಿ ಸುರೇಶ್, ರಂಗರಾಜು, ಲೋಕೇಶ್ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!