Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೆಂಪೇಗೌಡ ಪ್ರತಿಮೆ ಅನಾವರಣಕ್ಕೆ ದೊಡ್ಡ ಗೌಡರನ್ನೇ ಕರೆಯಲಿಲ್ಲ…

ನಾಡಪ್ರಭು ಕೆಂಪೇಗೌಡ ಅವರು 108 ಅಡಿ ಎತ್ತರದ ಪ್ರತಿಮೆ ಅನಾವರಣವನ್ನು ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದರು. ಆದರೆ ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಅಗ್ರಗಣ್ಯ ನಾಯಕ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಆಹ್ವಾನಿಸದೇ ಇರುವುದು ದೊಡ್ಡ ವಿವಾದವಾಗಿ ಏರ್ಪಟ್ಟಿದೆ.

ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ

ಚುನಾವಣೆ ದೃಷ್ಟಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ. ಪ್ರಧಾನಿ ಮೋದಿಯನ್ನು ರಾಜ್ಯ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ. ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಂಪೇಗೌಡರನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ, ನಮ್ಮೆಲ್ಲರ ಆರಾಧ್ಯದೈವ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರ್ಕಾರ ಮರೆತು ಅಪಮಾನಿಸಿದೆ ಎಂದು ಜೆಡಿಎಸ್ ಟ್ವೀಟ್​ ನಲ್ಲಿ ಕಿಡಿಕಾರಿದೆ.

ಕನ್ನಡಿಗರಿಗೆ ಮಾಡಿದ ಅಪಮಾನ

 

ಕೆಂಪೇಗೌಡರ ಬಳಿಕ ಬೆಂಗಳೂರು ಅಭಿವೃದ್ಧಿಗೆ ಕೊಡುಗೆ ನೀಡಿದ್ದು ದೇವೇಗೌಡರು. ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ ದೇವೇಗೌಡರು. ದೇವೇಗೌಡರನ್ನು ಆಹ್ವಾನಿಸದಿರುವುದು ಕನ್ನಡಿಗರಿಗೆ ಮಾಡಿದ ಅಪಮಾನ. ಪ್ರತಿಮೆ ಕಾಮಗಾರಿಗೆ ದೇವೇಗೌಡರನ್ನು ಆಹ್ವಾನಿಸಿದ್ದ ಬಿಜೆಪಿ ಸರ್ಕಾರವು ಪ್ರತಿಮೆ ಅನಾವರಣ ಸಮಾರಂಭಕ್ಕೆ ಯಾಕೆ ಆಹ್ವಾನ ಮಾಡಲಿಲ್ಲ? ಎಂದು ಜೆಡಿಎಸ್ ಪ್ರಶ್ನಿಸಿದೆ.

ಮಾಜಿ ಪ್ರಧಾನಿಯ ಕಡೆಗಣನೆ 

“>

 

ನಾಡಪ್ರಭುಗಳ ಪ್ರತಿಮೆ ಅನಾವರಣಕ್ಕೆ ಪ್ರಧಾನಿಗಳೇ ಬರುತ್ತಾರೆ ಅಂದರೆ ಹೆಮ್ಮೆಯ ಮಾಜಿ ಪ್ರಧಾನಿಯನ್ನೂ ಅಧಿಕೃತವಾಗಿ ಕರೆಯಲೇಬೇಕಿತ್ತು. ಬಿಜೆಪಿಯವರು ರಾಜಕೀಯಕ್ಕಾಗಿ ಮಾಜಿ ಪ್ರಧಾನಿ ಅವರನ್ನು ಕಡೆಗಣಿಸಿದ್ದಾರೆ. ಇದು ಮಾಜಿ ಪ್ರಧಾನಿಗೆ ಮಾತ್ರವಲ್ಲ, ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೆ ಮಾಡಿದ ಅಪಮಾನ ಎಂದು ಸರಣಿ ಟ್ವೀಟ್​ ಮೂಲಕ ಜೆಡಿಎಸ್​ ಕಿಡಿಕಾರಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!