ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಎಂ.ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಹುಟ್ಟುಹಬ್ಬವನ್ನು ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ಮತ್ತು ಬಾಗಿನ ವಿತರಣೆ ಮಾಡುವ ಮೂಲಕ ಮಂಡ್ಯದಲ್ಲಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ಮತ್ತು ಬಾಗಿನ ವಿತರಣೆ ಮಾಡಿ ಮಾತನಾಡಿ, ಖರ್ಗೆಯವರು ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುನ್ನೆಡೆಸುತ್ತಿದ್ಧಾರೆ. ಶೋಷಿತ ವರ್ಗದಿಂದ ಬಂದು ಒಂದು ರಾಷ್ಟ್ರೀಯ ಪಕ್ಷವನ್ನು ಮುನ್ನೆಡೆಸುವ ನಾಯಕತ್ವವಹಿಸಿಕೊಂಡಿದ್ದಾರೆ. ಅವರ ನಾಯಕತ್ವದಲ್ಲಿ ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಸಂಘಟನೆ ಬಲಿಷ್ಟವಾಗುತ್ತಿದೆ ಎಂದರು.
ಖರ್ಗೆಯವರ ಹುಟ್ಟುಹಬ್ಬವನ್ನು ಪೌರಕಾರ್ಮಿಕ ಮಹಿಳೆಯರಿಗೆ ಸೀರೆ ಮತ್ತು ಬಾಗಿನ ವಿತರಣೆ ಮಾಡಿ ಆಚರಣೆ ಮಾಡುತ್ತಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ವಕೀಲ ಸುಂಡಹಳ್ಳಿ ಮಂಜುನಾಥ್ ಕಾರ್ಯ ಶ್ಲಾಘನೀಯ ಎಂದರು.
ಸುಂಡಹಳ್ಳಿ ಮಂಜುನಾಥ್ ಮಾತನಾಡಿ, ಖರ್ಗೆಯವರು ಭಾರತ ದೇಶದ ಪ್ರಧಾನಿಯಾಗುವ ಉನ್ನತ ಸ್ಥಾನಕ್ಕೆ ಹೋಗಲಿ ಎಂದು ಆಶಿಸಿದರು.
ಸಾಮಾನ್ಯ ಕುಟುಂಬದಲ್ಲಿ ಜನಿಸಿದ ಮಲ್ಲಿಕಾರ್ಜುನ ಖರ್ಗೆ ಅವರು ಅದರಲ್ಲೂ ದಲಿತ ಕುಟುಂಬದಲ್ಲಿ ಜನಿಸಿದ ಅವರು ಎಐಸಿಸಿ ಅಧ್ಯಕ್ಷರಾಗಿ ಚುಕ್ಕಾಣಿ ಹಿಡಿದಿರುವುದು ಸಂತೋಷದ ವಿಷಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಶಾಸಕರಾದ ಪಿ.ರವಿಕುಮಾರ್, ಕದಲೂರು ಉದಯ್, ಮೈಷುಗರ್ ಕಾರ್ಖಾನೆಯ ಅಧ್ಯಕ್ಷ ಸಿ.ಡಿ. ಗಂಗಾಧರ್, ಮುಡಾ ಅಧ್ಯಕ್ಷ ನಹೀಮ್, ಮಂಡ್ಯ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಎಂ.ಎನ್.ಶ್ರೀಧರ್, ನಗರಸಭಾ ಮಾಜಿ ಅಧ್ಯಕ್ಷದ ಹೆಚ್.ಎಸ್. ಮಂಜು , ಸದ್ಯಸರಾದ ಗೀತಾ, ಭಾರತೀಶ್, ಹರೀಶ್, ಶಿವಪ್ರಕಾಶ್ ಸೇರಿದಂತೆ ಕಾಂಗ್ರೆಸ್ ಮುಖಂಡರಾದ ಸಿ.ತ್ಯಾಗರಾಜು, ಚಂದ್ರಶೇಖರ್,ವಿಶ್ವನಾಥ್, ಸಿ.ಎಂ. ದ್ಯಾವಪ್ಪ ಸೇರಿದಂತೆ ಇತರರು ಹಾಜರಿದ್ದರು.




