ತಾಯಿ ಮತ್ತು ಮಗುವಿನ ಆರೋಗ್ಯದ ಹಿತ ದೃಷ್ಟಿಯಿಂದ ಕಿಲ್ಕಾರಿ ಮೊಬೈಲ್ ಆಧಾರಿತ ಉಚಿತ ಸೇವೆಯ ಸದುಪಯೋಗ ಪಡೆದುಕೊಳ್ಳಿ ಎಂದು ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಹೇಳಿದರು.
ಪಾಂಡವಪುರ ತಾಲೂಕಿನ ಮೇಲುಕೋಟೆ ಗ್ರಾಮದ ಚೆಲುವ ನಾರಾಯಣಸ್ವಾಮಿ ವೈರಮುಡಿ ಬ್ರಹ್ಮೋತ್ಸವದಲ್ಲಿ ಆರೋಗ್ಯ ಇಲಾಖೆಯಿಂದ ಏರ್ಪಡಿಸಿದ ಆರೋಗ್ಯ ಮಾಹಿತಿ ಪ್ರದರ್ಶನ ಮಳಿಗೆಯಲ್ಲಿ ಕೀಲ್ಕಾರಿ ಯೋಜನೆಯ ಭಿತ್ತಿ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ಎಲ್ಲಾ ಗರ್ಭಿಣಿಯರು ಆರೋಗ್ಯ ಇಲಾಖೆಯಲ್ಲಿ ನಿಗದಿತ ಸಮಯದಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಕೊಂಡು ಕಿಲ್ಕಾರಿ ಯೋಜನೆಯ ಮೋಬೈಲ್ ಆಧಾರಿತ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಈ ವೇಳೆ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್, ಶಿವಮ್ಮಎನ್ ಸಿ, ಶ್ವೇತಲತಾ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಪುಟ್ಟಸ್ವಾಮಿ, ಮಂಡ್ಯ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ತಿಮ್ಮರಾಜು, ಸಮಾಜ ಕಾರ್ಯಕರ್ತ ಮೋಹನ್ ಇತರರು ಹಾಜರಿದ್ದರು




