Friday, October 18, 2024

ಪ್ರಾಯೋಗಿಕ ಆವೃತ್ತಿ

ಛತ್ತೀಸ್‌ಗಢ| ದಂತೇವಾಡ ಅಂತರ ಜಿಲ್ಲಾ ಗಡಿಯಲ್ಲಿ 30 ನಕ್ಸಲರ ಹತ್ಯೆ

ಛತ್ತೀಸ್‌ಗಢದ ದಂತೇವಾಡ ಗಡಿ ನಾರಾಯಣಪುರ-ದಂತೇವಾಡ ಅಂತರ ಜಿಲ್ಲಾ ಗಡಿಯಲ್ಲಿರುವ ಅಬುಜ್‌ಮದ್ ಅರಣ್ಯದಲ್ಲಿ ಅ.4ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ನಡೆದು, 30 ನಕ್ಸಲರು ಹತರಾಗಿದ್ದಾರೆ.

ದಾಂತೇವಾಡ ಗಡಿಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಕನಿಷ್ಠ 30 ನಕ್ಸಲೀಯರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾರಾಯಣಪುರ-ದಂತೇವಾಡ ಅಂತರ ಜಿಲ್ಲಾ ಗಡಿಯಲ್ಲಿರುವ ಅಬುಜ್‌ಮದ್ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆ ನಡೆಸಿತು.

ಟೈಮ್ಸ್ ಆಫ್ ಇಂಡಿಯಾದ ವರದಿಯ ಪ್ರಕಾರ, ನಕ್ಸಲೀಯರ ಶವಗಳನ್ನು ಇನ್ನೂ ಗುರುತಿಸಲಾಗಿಲ್ಲ ಮತ್ತು ಕೊಲ್ಲಲ್ಪಟ್ಟವರಲ್ಲಿ ಹಿರಿಯ ಕಾರ್ಯಕರ್ತರೂ ಇರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಾರ ಪ್ರಮಾಣದ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!