ಇಂಧನ ಸಚಿವ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ಜನವರಿ 7 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಜನವರಿ 7 ರಂದು ಬೆಳಿಗ್ಗೆ 10.30 ಗಂಟೆಗೆ ಕಾಂಗ್ರೆಸ್ ಕ್ಷದ ಕಚೇರಿಗೆ ಭೇಟಿ ನೀಡಲಿದ್ದಾರೆ.
ಬೆಳಿಗ್ಗೆ 11.30 ಗಂಟೆಗೆ ಮಂಡ್ಯ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಇಂಧನ ಇಲಾಖೆಗೆ ಸಂಬಂಧಪಟ್ಟ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಮಂಡ್ಯ ಜಿಲ್ಲೆಯ ಎಲ್ಲಾ ಚುನಾಯಿತ ಜನ ಪ್ರತಿನಿಧಿಗಳೊಂದಿಗೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಮಧ್ಯಾಹ್ನ 2.30 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




