ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಸುರೇಶ್ (45) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಬಂಗಾರಪೇಟೆ ಪೊಲೀಸ್ ಠಾಣೆಯ ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಸುರೇಶ್ ಕೆಸರನಹಳ್ಳಿ ಗ್ರಾಮದವರಾಗಿದ್ದು, ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಬುಧವಾರ ರಾತ್ರಿ ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಗುರುವಾರ ಬೆಳಗಿನ ಜಾವ ಬಂಗಾರಪೇಟೆ ಬಸ್ ನಿಲ್ದಾಣದ ಬಳಿ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನಲಾಗಿದೆ.
ಸುರೇಶ್‌ರವರ ಪಾರ್ಥೀವ ಶರೀರವನ್ನು ಸಾರ್ವಜನಿಕ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಪೊಲೀಸ್ ವರಿಷ್ಠಾಧಿಕಾರಿ ಡಾ ಧರಣಿದೇವಿ ಸ್ಥಳೀಯ ಶಾಸಕ ಎಸ್ ಎನ್ ನಾರಾಯಣಸ್ವಾಮಿ, ಬಿಜೆಪಿ ಮುಖಂಡರಾದ ಕೆ.ಚಂದ್ರಾರೆಡ್ಡಿ, ಬಿ.ವಿ.ಮಹೇಶ್, ಕನ್ನಡ ಸಂಘದ ಅಧ್ಯಕ್ಷೆ ಪಲ್ಲವಿ ಮಣಿ ಮತ್ತು ಪ್ರಮುಖ ಮುಖಂಡರು ಭೇಟಿ ನೀಡಿ ದರ್ಶನ ಪಡೆದರು. ಹೆಡ್‌ಕಾನ್‌ಸ್ಟೇಬಲ್ ಸುರೇಶ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಪೊಲೀಸ್ ಹೆಡ್‌ಕಾನ್‌ಸ್ಟೇಬಲ್ ಸುರೇಶ್ ಅವರ ಅಂತ್ಯಕ್ರಿಯೆಯನ್ನು ಅವರ ಸ್ವ-ಗ್ರಾಮವಾದ ಕೆಸರನಹಳ್ಳಿ ಯಲ್ಲಿ ಸಕಲ ಸರ್ಕಾರಿ ಗೌರವದ ಮೂಲಕ ನೆರವೇರಿಸಲಾಯಿತು.




