Thursday, November 19, 2026

ಪ್ರಾಯೋಗಿಕ ಆವೃತ್ತಿ

ಕೋಲಾರ | ಸಿದ್ದರಾಮಯ್ಯ ಬದಲು ಕೊತ್ತೂರು ಮಂಜುನಾಥ್ ಗೆ ಟಿಕೆಟ್

ಕಾಂಗ್ರೆಸ್ ಪಕ್ಷ 2023ರ ವಿಧಾನಸಭಾ ಚುನಾವಣೆಯ 3ನೇ ಪಟ್ಟಿ ಬಿಡುಗಡೆ ಮಾಡಿದ್ದು, 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಿದೆ‌.

ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಮಾಡುತ್ತಾರೆಂಬ ಹಿನ್ನಲೆಯಲ್ಲಿ ಸಾಕಷ್ಟು ಕುತೂಹಲ ಕೆರಳಿಸಿದ್ದ ಕೋಲಾರ ಕ್ಷೇತ್ರದಿಂದ ಮಾಜಿ‌ ಶಾಸಕ‌ ಕೊತ್ತೂರು ಮಂಜುನಾಥ್ ಹೆಸರು ಘೋಷಣೆ ಮಾಡಲಾಗಿದೆ‌.

ಕೊತ್ತೂರು ಮಂಜುನಾಥ್ 2013ರಲ್ಲಿ ಮುಳಬಾಗಿಲು (ಪರಿಶಿಷ್ಟ ಜಾತಿ ಮೀಸಲು) ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಆದರೆ ಅವರ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಅಸಿಂಧುವಾದ್ದರಿಂದ 2018ರಲ್ಲಿ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಅವರು ಕೋಲಾರದಿಂದ ಟಿಕೆಟ್ ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಇನ್ನು ತೇರದಾಳ ಕ್ಷೇತ್ರದ ಟಿಕೆಟ್ ಚಿತ್ರನಟಿ, ಮಾಜಿ ಸಚಿವೆ ಉಮಾಶ್ರೀ ಕೈ ತಪ್ಪಿದೆ. ಇಲ್ಲಿಂದ ಸಿದ್ದಪ್ಪ ಕೊಣ್ಣೂರು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗೆಯೇ ಮೈಸೂರಿನ ಚಾಮರಾಜ ಕ್ಷೇತ್ರದಿಂದ ಹರೀಶ್ ಗೌಡರಿಗೆ ಹಾಗೂ ಕೃಷ್ಣರಾಜ ಕ್ಷೇತ್ರದಿಂದ ಸೋಮಶೇಖರ್ ಅವರಿಗೆ ಟಿಕೆಟ್ ನೀಡಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ