Thursday, September 19, 2024

ಪ್ರಾಯೋಗಿಕ ಆವೃತ್ತಿ

ಹಿಂದುಳಿದವರ ಮಕ್ಕಳು ಉನ್ನತ ಹುದ್ದೆಗೇರಲು ಸಂವಿಧಾನ ಕಾರಣ : ಕೋಟ ಶ್ರೀನಿವಾಸ ಪೂಜಾರಿ

ಪ್ರಸ್ತುತ ದಿನಗಳಲ್ಲಿ ಅತ್ಯಂತ ಹಿಂದುಳಿದ ವರ್ಗಕ್ಕೆ ಸೇರಿದ ಸಮುದಾಯದ ಮಕ್ಕಳು ಡಾಕ್ಟರ್, ಇಂಜಿನಿಯರ್ ಗಳಂತಹ ಉನ್ನತ ಹುದ್ದೇಗಳಿಗೇರಲು ಅವಕಾಶ ಮಾಡಿ ಕೊಟ್ಟಿದ್ದು ನಮ್ಮ ಭಾರತ ಸಂವಿಧಾನ ಎಂದು ಸಮಾಜಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಮರಿಸಿದರು.

ಮಂಡ್ಯ ಜಿಲ್ಲಾ ಕುಂಬಾರರ ಜಾಗೃತ ವೇದಿಕೆ ಮತ್ತು ಸರ್ವಜ್ಞ ಕುಂಬಾರ ಸೇವಾ ಟ್ರಸ್ಟ್ ವತಿಯಿಂದ ಮಂಡ್ಯ ನಗರದ ಸಿಲ್ವರ್ ಜ್ಯುಬಿಲಿ ಪಾರ್ಕ್‌ನಲ್ಲಿ ಭಾನುವಾರ ನಡೆದ ಮೈಸೂರು ವಿಭಾಗ ಮಟ್ಟದ ಕುಂಬಾರರ ಜಾಗೃತಿ ಸಮಾವೇಶ ಹಾಗೂ ಕುಂಭರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಕೂಲಿ ಮಾಡುವವರ, ಬಟ್ಟೆ ಒಗೆಯುವವರ, ಮಡಿಕೆ ಮಾಡುವವರ ಮಕ್ಕಳು ಮೆರಿಟ್ ನಲ್ಲಿ ಸೀಟ್ ಪಡೆದು ಎಂಬಿಬಿಎಸ್ ಮುಗಿಸಿ ವೈದ್ಯರಾಗಿರುವ ನಿದರ್ಶನಗಳನ್ನು ನಾನು ಕಣ್ಣರೇ ಕಂಡಿದ್ದೇನೆ, ಇದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಶಕ್ತಿ. ಎಲ್ಲಾ ಹಿಂದುಳಿದ ವರ್ಗದವರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ರಾಜ್ಯದಲ್ಲಿ ದಕ್ಕಲಿಗರು ಎಂಬ ಒಂದು ಸಮುದಾಯವಿದೆ, ಅವರು ಇಡೀ ರಾಜ್ಯದಲ್ಲಿ ಕೇವಲ 450 ರ ಸಂಖ್ಯೆಯಲ್ಲಿದ್ದಾರೆ. ಅವರಿಗೆ ಶಿಕ್ಷಣದ ಅರಿವೆ ಇಲ್ಲ ಅಂತಹವರಿಗೆ ಶಿಕ್ಷಣದ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

ಕೆಳಸ್ತರದಲ್ಲಿ ಬದುಕುತ್ತಿರುವ ಸಮುದಾಯಗಳಿಗೆ ರಾಜಕೀಯ, ಆರ್ಥಿಕ, ಸಾಮಾಜಿಕ ಸ್ಥಾನಮಾನಗಳನ್ನು ಒದಗಿಸಲು ಸರ್ಕಾರವು ಪ್ರಯತ್ನ ನಡೆಸುತ್ತಿದೆ, ಮುಂದಿನ ದಿನಗಳಲ್ಲಿ ಕುಂಬಾರರ ಸಮಸ್ಯೆಗಳ ಕುರಿತು ಈ ಸಮದಾಯ ಮುಖಂಡರೊಂದಿಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ನ್ಯಾಯ ಒದಗಿಸಿಕೊಡುವುದಾಗಿ ಅವರು ಭರವಸೆ ನೀಡಿದರು. ಹಲವು ಸಾಧಕರಿಗೆ ಕುಂಭ ರತ್ನ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಶಾಸಕ ಡಾ.ಕೆ.ಅನ್ನದಾನಿ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್‌ ಜಯರಾಂ, ರಾಜ್ಯ ಕುಂಬಾರರ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆರ್.ಶ್ರೀನಿವಾಸ್‌, ಹಿಂದುಳಿದ ವರ್ಗಗಳ ವೇದಿಕೆ ಜಿಲ್ಲಾಧ್ಯಕ್ಷ ಎಲ್.ಸಂದೇಶ್, ಕುಂಬಾರ ಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಮತ್ತಿತರರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!