Wednesday, November 18, 2026

ಪ್ರಾಯೋಗಿಕ ಆವೃತ್ತಿ

ಜನತೆಯ ಸೇವೆಗಾಗಿ ಜನಪರ ಕೆಲಸ ಮಾಡುತ್ತೇನೆ – ಶಾಸಕ ಹೆಚ್.ಟಿ.ಮಂಜು

ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಪ್ರಜ್ಞಾವಂತ ಮತದಾರ ಬಂಧುಗಳು ರೈತರ ಪಕ್ಷವಾದ ಜಾತ್ಯಾತೀತ ಜನತಾದಳ ಪಕ್ಷದ ಅಭ್ಯರ್ಥಿಯಾಗಿ ಕಣದಲ್ಲಿದ್ದ ನನ್ನನ್ನು ತಮ್ಮ ಮಗನೆಂದು ಭಾವಿಸಿ ಅಮೂಲ್ಯವಾದ ಮತನೀಡಿ ಶಾಸಕನನ್ನಾಗಿ ಆಯ್ಕೆ ಮಾಡಿದ್ದಾರೆ, ಜನತೆ ಕೊಟ್ಟಿರುವ ಅಧಿಕಾರವನ್ನು ಸವಾಲಾಗಿ ಸ್ವೀಕರಿಸಿ ಜನಪರವಾಗಿ ಕೆಲಸ ಮಾಡುತ್ತೇನೆ ಎಂದು ಶಾಸಕ ಹೆಚ್.ಟಿ.ಮಂಜು ಹೇಳಿದರು

ಕೆ.ಆರ್.ಪೇಟೆ ಪಟ್ಟಣದಲ್ಲಿ ತಾಲ್ಲೂಕಿನ ಹಿಂದುಳಿದ ಜಾತಿಗಳ ಒಕ್ಕೂಟದ ವತಿಯಿಂದ ನಡೆದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಒಂದು ಕಡೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡಿನ ಪ್ರಚಾರ ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಯ ಅಬ್ಬರ ಹಾಗೂ ಆಮಿಷಗಳನ್ನು ಧಿಕ್ಕರಿಸಿ ನಿಂತ ಕೃಷ್ಣರಾಜಪೇಟೆ ತಾಲ್ಲೂಕಿನ ಪ್ರಜ್ಞಾವಂತ ಜನತೆಯು ಒಬ್ಬ ಸಾಮಾನ್ಯ ರೈತನ ಮಗನಾದ ನನ್ನನ್ನು ಆಶೀರ್ವದಿಸಿ ಹರಸುವ ಮೂಲಕ ಕೆ.ಆರ್.ಪೇಟೆ ತಾಲ್ಲೂಕಿನ ರಾಜಕೀಯ ಇತಿಹಾಸದಲ್ಲಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿದ್ದಾರೆ ಎಂದರು.

ಜಿಲ್ಲೆಯ ಎಲ್ಲಾ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಕೆ.ಆರ್.ಪೇಟೆಯಲ್ಲಿ ಒಬ್ಬ ಸಾಮಾನ್ಯ ರೈತನ ಮಗನಾದ ನನಗೆ ಸಿಕ್ಕಿರುವ ಭಾರೀ ಬಹುಮತಗಳ ಅಂತರದ ಗೆಲುವು ತಾಲ್ಲೂಕಿನ ಜನತೆಯ ಗೆಲುವಾಗಿದೆ ಎಂದು ಮಂಜು ಭಾವುಕರಾಗಿ ಹೇಳಿದರು.

ಅಹಿಂದ ನಾಯಕರಾದ ವಕೀಲ ವಡ್ಡರಹಳ್ಳಿ ಧನಂಜಯಕುಮಾರ್, ತಾಲ್ಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕಾರಿಗನಹಳ್ಳಿ ಕುಮಾರ್, ವಾಲ್ಮೀಕಿ ನಾಯಕ ಜನಾಂಗದ ಮುಖಂಡ ಪಿ.ಜೆ.ವೆಂಕಟರಾಮು, ನೇಕಾರ ತೊಗಟವೀರ ಸಮಾಜದ ಮುಖಂಡ ಕೆ.ಆರ್.ಪುಟ್ಟಸ್ವಾಮಿ, ಮಡಿವಾಳ ಸಮಾಜದ ಮುಖಂಡ ಶೀಳನೆರೆ ಸಿದ್ಧೇಶ್, ಶೀಳನೆರೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಗಾಯತ್ರಿ, ಕೆ.ಆರ್.ಪೇಟೆ ತಾಲ್ಲೂಕು ಜಾತ್ಯಾತೀತ ಜನತಾದಳ ಅಧ್ಯಕ್ಷ ಜಾನಕೀರಾಮು, ಮಹಿಳಾ ಘಟಕದ ಅಧ್ಯಕ್ಷೆ ಸೋಮನಹಳ್ಳಿ ರೇಖಾ ಸೇರಿದಂತೆ ನೂರಾರು ಜನ ಕಾರ್ಯಕರ್ತರು ಹಿಂದುಳಿದ ಸಮಾಜಗಳ ಮುಖಂಡರು ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ