Friday, November 20, 2026

ಪ್ರಾಯೋಗಿಕ ಆವೃತ್ತಿ

ಜನರ ಸಮಸ್ಯೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ: ಚಲುವರಾಯಸ್ವಾಮಿ

ಸಾರ್ವಜನಿಕರಿಗೆ ಹಲವಾರು ಸಮಸ್ಯೆಗಳು‌ ಇರುತ್ತದೆ. ಇರುವ ಎಲ್ಲಾ ಸಮಸ್ಯೆಗಳನ್ನು ನಿಯಮಾನುಸಾರ ಪರಿಹರಿಸಲು ಮಂಡ್ಯ ಜಿಲ್ಲಾಡಳಿತದಿಂದ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ .ಚಲುವರಾಯಸ್ವಾಮಿ ತಿಳಿಸಿದರು.

ಕೆ.ಆರ್.ಪೇಟೆಯಲ್ಲಿ ಆಯೋಜಿಸಲಾಗಿದ್ದ ಜನಸ್ಪಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ರೂಪಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಪಕ್ಷತೀತ ಹಾಗೂ ಯಾವುದೇ ಜಾತಿಗೆ ಸೀಮಿತಗೊಳಿಸದೆ ಎಲ್ಲರಿಗೂ ನೀಡಲಾಗುತ್ತಿದೆ ಎಂದರು.

ಜನಪ್ರತಿನಿಧಿಗಳು ಹಲವಾರು ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಾರೆ. ಆದರೆ ಇನ್ನು ಅಭಿವೃದ್ಧಿ ಕೆಲಸಗಳು ಮಾಡಬೇಕಿರುತ್ತದೆ. ಅಭಿವೃದ್ಧಿ ಕೆಲಸಗಳು ಜನಪ್ರತಿನಿಧಿಗಳು ನಿರಂತರವಾಗಿ‌ ಮಾಡಬೇಕು. ಜಿಲ್ಲೆಯಲ್ಲಿ ರೈತರ ಹಿತದೃಷ್ಠಿಯಿಂದ ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಹಾಗೂ ಹೊಸ ಕೃಷಿ ವಿಶ್ವವಿದ್ಯಾನಿಲಯವನ್ನು ಸಹ ಪ್ರಾರಂಭಿಸಲಾಗುತ್ತಿದೆ ಎಂದರು.

ಕಳೆದ ಎರಡು ವರ್ಷಗಳಲ್ಲಿ 20 ಸಾವಿರಕ್ಕೂ ಹೆಚ್ಚಿನ ಕಂದಾಯ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ರಾಜ್ಯ ಸರ್ಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಇ ಖಾತೆ, ಇ ಸ್ವತ್ತು, ಬಿ ಸ್ವತು ಗಳ ನಿಯಮಾವಳಿಗಳನ್ನು ಸರಳಿಕರಣಗೊಳಿಸಲು ಚಿಂತನೆ ನಡೆಸಿದೆ ಶೀಘ್ರದಲ್ಲಿ ಸಾರ್ವಜನಿಕರ ಸಮಸ್ಯೆಯನ್ನು ಪರಿಹರಿಸಲು ಹೊಸ ನಿಯಮಾವಳಿಗಳನ್ನು ಜಾರಿಗೆ ತರಲಾಗುವುದು ಎಂದರು.

ಕಳೆದ ಮೂರು ತಿಂಗಳಲ್ಲಿ ಕೆ.ಆರ್ ಪೇಟೆಯಲ್ಲಿ 219 ಪೋಡಿಯನ್ನು ದುರಸ್ಥಿ ಮಾಡಲಾಗಿದೆ, ಜಿಲ್ಲೆಯಲ್ಲಿ ಒಟ್ಟು 8000 ಪೌತಿ ಖಾತೆ ಮಾಡಿ ಕೊಡಲಾಗಿದೆ ಎಂದು ತಿಳಿಸಿದರು.

ದೂರು ಕೇಂದ್ರ ತೆರೆಯಿರಿ ಕಂದಾಯ ಹಾಗೂ ಇತರೆ ಇಲಾಖೆಗೆ ಸಂಬಂಧಿಸಿದಂತೆ ತಾಲ್ಲೂಕು ಮಟ್ಟದ ಕಚೇರಿಗಳಲ್ಲಿ ಕೆಲಸಗಳು ಆಗದಿದ್ದಲ್ಲಿ ಸಾರ್ವಜನಿಕರು ದೂರು ಸಲ್ಲಿಸಲು ತಹಶೀಲ್ದಾರ್ ಹಾಗೂ‌ ತಾಲ್ಲೂಕು ಪಂಚಾಯತ್ ಕಚೇರಿಗಳಲ್ಲಿ ದೂರು ಕೇಂದ್ರ ತೆರೆಯಿರಿ. ಇಲ್ಲಿ ಸಲ್ಲಿಕೆಯಾಗುವ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪರಿಶೀಲಿಸುವಂತೆ ತಿಳಿಸಿದರು.

ಸಮಸ್ಯೆಗಳನ್ನು ಒಮ್ಮಲೇ ಪರಿಗಣಿಸಲು ಸಾಧ್ಯವಿಲ್ಲ. ಸ್ವಾತಂತ್ರ್ಯ ಬಂದು ಹಲವಾರು ವರ್ಷಗಳು ಕಳೆದರು ಸಮಸ್ಯೆಗಳು ಇನ್ನು ಉಳಿದಿದೆ ಎಂದರೆ ಜನಪ್ರತಿನಿಧಿಗಳು, ಅಧಿಕಾರಿಗಳು ಅಥವಾ ಜನರು ಕಾರಣವೇ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದರು.

ಕೆ.ಆರ್.ಪೇಟೆ ಶಾಸಕ ಹೆಚ್.ಟಿ. ಮಂಜು ಅವತು ಮಾತನಾಡಿ 26.80 ಕೋಟಿ ರೂ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಜಿಲ್ಲಾ ಉಸ್ತುವರಿ ಸಚಿವರು ಲೋಕಾರ್ಪಣೆ ಮಾಡಿದ್ದಾರೆ ಎಂದರು.

ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಅಗತ್ಯಕ್ಕನುಗುಣವಾಗಿ ಕೆರೆ ಅಭಿವೃದ್ಧಿ ಕಾಮಗಾರಿಗಳು, ವಿದ್ಯುತ್ ಉಪ ಕೇಂದ್ರಗಳನ್ನು ಪ್ರಾರಂಭಿಸುವಂತೆ ಸಚಿವರಿಗೆ ಮನವಿ ಮಾಡಿದರು‌.

ನಮ್ಮ ಹಿರಿಯರು ಮುಂದಿನ ಪೀಳಿಗೆಯ ನೀರಿನ ಸಮಸ್ಯೆ ಎದುರಿಸಬಾರದೆಂಬ ಕಾರಣಕ್ಕಾಗಿ ನಿರ್ಮಿಸಲಾಗಿದ್ದ ಕೆರೆಕಟ್ಟೆಗಳು ಪ್ರವಾಹದ ಸಂದರ್ಭದಲ್ಲಿ ಹೊಡೆದು ಹೋಗಿದೆ, ಸಚಿವರು ಜಿಲ್ಲೆಯ ಕೆರೆಕಟ್ಟೆಗಳನ್ನು ದುರಸ್ಥಿ ಮಾಡಿಕೋಡಿ ಎಂದು ಮನವಿ ಮಾಡಿದರು.

ಎಸ್.ಎಸ್.ಎಲ್.ಸಿ ಯಲ್ಲಿ ಅತಿ ಹೆಚ್ಚು ಅಂಕ ಪಡೆದ 3 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡ ಫಲಾನುಭವಿಗಳಿಗೆ ಹಾಗೂ ಕೃಷಿ ಯಂತ್ರೀಕರಣ ಯೋಜನೆಯಡಿ ಸಹಾಯಧನ ವಿತರಿಸಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸುಕನ್ಯ ಸಮೃದ್ಧಿ ಯೋಜನೆಯ ಫಲಾನುಭವಿಗಳಿಗೆ ಪಾಸ್ ಪುಸ್ತಕ ವಿತರಿಸಲಾಯಿತು. ಕಂದಾಯ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಪೌತಿ ಖಾತೆ ಪತ್ರ, ದರಖಾಸ್ತು ಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಷುಗರ್ ಅಧ್ಯಕ್ಷ ಸಿ.ಡಿ ಗಂಗಾಧರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಮಾಜಿ ಶಾಸಕರಾದ ಚಂದ್ರಶೇಖರ್, ಪ್ರಕಾಶ್, ಕೆ.ಆರ್.ಪೇಟೆ ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್, ಉಪವಿಭಾಗಾಧಿಕಾರಿ ಶ್ರೀನಿವಾಸ್, ತಹಶೀಲ್ದಾರ್ ಅಶೋಕ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಸುಷ್ಮಾ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ