Friday, September 20, 2024

ಪ್ರಾಯೋಗಿಕ ಆವೃತ್ತಿ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ: ಕ್ರಿಶನ್ ಪಾಲ್ ಗುರ್ಜರ್

ರಾಜ್ಯ ಸೇರಿದಂತೆ ಇಡೀ ದೇಶಕ್ಕೆ ಮೋದಿ ಅವರೇ ಗ್ಯಾರಂಟಿ. ಈ ಬಗ್ಗೆ ಜನರಲ್ಲಿ ವಿಶ್ವಾಸವಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜಾ.ದಳ (ಎನ್‌ಡಿಎ) ಮೈತ್ರಿಕೂಟ ಹೆಚ್ಚಿನ ಸ್ಥಾನವನ್ನು ಗೆಲ್ಲಲಿದೆ ಎಂದು ಕೇಂದ್ರದ ವಿದ್ಯುತ್ ಮತ್ತು ಭಾರೀ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕೇವಲ ಮೋದಿ ಗ್ಯಾರಂಟಿ ನಡೆಯುತ್ತಿದೆ. ಇವರ ಗ್ಯಾರಂಟಿ ಬಿಟ್ಟರೆ ಇನ್ಯಾವ ಗ್ಯಾರಂಟಿ ಕೂಡ ನಡೆಯುವುದಿಲ್ಲ. ಕರ್ನಾಟಕದಲ್ಲಿ 28 ಸ್ಥಾನವನ್ನು ಗೆಲ್ಲಲು ಈಗಾಗಲೇ ಟಾರ್ಗೆಟ್ ಮಾಡಿಕೊಂಡಿದ್ದೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳನ್ನು ಟೀಕಿಸಿದರು.

ಬಿಜೆಪಿ ಮತ್ತು ಜಾ.ದಳ ಮೈತ್ರಿಯಿಂದ ಈವರೆಗೂ ಒಳ್ಳೆಯದೇ ಆಗಿದೆಯೇ ಹೊರತು ಕೆಟ್ಟದಾಗಿಲ್ಲ. ದೇಶದಲ್ಲಿ ಕಾಂಗ್ರೆಸ್ ಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ. ಕಾಂಗ್ರೆಸ್ ಜತೆ ಯಾವ ಪಕ್ಷದವರೂ ಕೂಡ ಸೇರುತ್ತಿಲ್ಲ ಅವರು ಏಕಾಂಗಿಯಾಗುತ್ತಿದ್ದಾರೆ. ನರೇಂದ್ರ ಮೋದಿಯವರನ್ನು ಎದುರಿಸಲು ಅವರಿಗೆ ಸಾಧ್ಯವಾಗುತ್ತಿಲ್ಲ ಎಂದು ಕಾಂಗ್ರೆಸ್‌ಗೆ ಟಾಂಗ್ ನೀಡಿದರು.

ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ಸಮಯ ಸಂದರ್ಭದಲ್ಲಿ ಹೊಂದಾಣಿಕೆ ಮಾಡಿಕೊಂಡು ಹೋಗಬೇಕಾಗುತ್ತದೆ. ಬಿಜೆಪಿ ಮತ್ತು ಜಾ.ದಳ ಮೈತ್ರಿಯಿಂದ ರಾಜ್ಯ ಮತ್ತು ದೇಶಕ್ಕೆ ಅನುಕೂಲವಾಗಲಿದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ. ರಾಜಸ್ಥಾನ ಮತ್ತು ಮಧ್ಯಪ್ರದೇಶದ ಫಲಿತಾಂಶ ಕರ್ನಾಟಕದಲ್ಲೂ ಮರುಕಳಿಸಲಿದೆ. ಹರಿಯಾಣದಲ್ಲಿ ೨೮ ಸೀಟುಗಳನ್ನು ಗೆದ್ದಂತೆ ಕರ್ನಾಟಕದಲ್ಲೂ ಕೂಡ ೨೮ಕ್ಕೆ ೨೮ನ್ನೂ ಎನ್‌ಡಿಎ ಮೈತ್ರಿಕೂಟ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠರು ಬರುವುದಿಲ್ಲ, ಇದಕ್ಕೆ ನಮ್ಮ ವಿರೋಧವಿದೆ ಎಂದು ಹೇಳಿದ್ದಾರೆ. ಸನಾತನ ಧರ್ಮ ವಿರೋಧ ಮಾಡುವ ಮೂಲಕ ಕಾಂಗ್ರೆಸ್ ಪಕ್ಷ ನಿರ್ಮೂಲನೆ ಆಗುತ್ತಿದೆ ಎಂದರು.

ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್, ಮುಖಂಡರಾದ ಡಾ. ಸಿದ್ದರಾಮಯ್ಯ, ಅಶೋಕ್ ಜಯರಾಂ, ಡಾ. ಎನ್.ಎಸ್. ಇಂದ್ರೇಶ್ ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!