Thursday, September 19, 2024

ಪ್ರಾಯೋಗಿಕ ಆವೃತ್ತಿ

ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧೆ : ಕೃಷ್ಣೇಗೌಡ

ಮೇಲುಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ರೈತ ಬಣದ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಸಂಘದ ರಾಜ್ಯಾಧ್ಯಕ್ಷ ಇ.ಎನ್.ಕೃಷ್ಣೇಗೌಡ ಇಂಗಲಕುಪ್ಪೆ ಹೇಳಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ನಾಲ್ಕೂವರೆ ವ‍ರ್ಷದಿಂದ ಕ್ಷೇತ್ರದಲ್ಲಿ ಗುರುತಿಸಿಕೊಂಡು ದುಡಿಯುತ್ತಿದ್ದೇನೆ, ಮಂಡ್ಯ ಜಿಲ್ಲೆಯಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಅತಿ ಹೆಚ್ಚು ಒತ್ತು ನೀಡಲಾಗಿದ್ದು, ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲೂ ರೈತ ಬಣದ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ ಎಂದರು.

ವಿಶೇಷವಾಗಿ ಹಳೇ ಮೈಸೂರು ವಿಭಾಗದಲ್ಲಿ ಹೆಚ್ಚು ಗಮನ ಹರಿಸಿದ್ದು, ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿಯೂ ಸಂಘ ಎಚ್ಚರಿಕೆಯ ನಡೆಯನ್ನು ಅನುಸರಿಸುತ್ತಿದೆ. ಮಂಡ್ಯ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ  ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುವುದು ಎಂದರು.

ಗೋಷ್ಠಿಯಲ್ಲಿ ಮುಖಂಡರಾದ ಹೆಚ್.ಎನ್.ಕೃಷ್ಣೇಗೌಡ, ಹೆಚ್.ಎಸ್.ಚಂದ್ರಶೇಖರ್, ಕುಮಾರ್ ಕೆ ಪಿ , ಟಿ ಆರ್ ಕೃಷ್ಣ, ವಸಂತಕುಮಾರ್, ನಾಗರಾಜು, ವೆಂಕಟೇಶ್ ಹಾಗೂ ರಘುಗೌಡ ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!