Monday, November 23, 2026

ಪ್ರಾಯೋಗಿಕ ಆವೃತ್ತಿ

KRS ವರ್ಷದಲ್ಲಿ 3ನೇ ಬಾರಿ ಭರ್ತಿ | ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ : ಡಿ.ಕೆ.ಶಿವಕುಮಾರ್

ಕೆಆರ್ ಎಸ್ ವರ್ಷದಲ್ಲಿ 3ನೇ ಬಾರಿ ಭರ್ತಿಯಾಗಿದೆ, ನಮ್ಮ ಸರ್ಕಾರದ ಮೇಲೆ ವರುಣನ ಕೃಪೆಯಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕಾವೇರಿ ಈಗ ಸಂತೃಪ್ತಿಯಾಗಿ ಮೈದುಂಬಿ ಹರಿಯುತ್ತಿದ್ದಾಳೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಕೃಷ್ಣರಾಜಸಾಗರ ಜಲಾಶಯ ಭರ್ತಿಯಾಗಿ ಇತಿಹಾಸ ನಿರ್ಮಾಣವಾಗಿರುವುದು ಮಾತ್ರವಲ್ಲದೆ ಬೆಂಗಳೂರಿಗೆ ಬೇಸಿಗೆಯ ನೀರಿನ ಕೊರತೆ ಕೂಡ ಕಣ್ಮರೆಯಾಗುತ್ತದೆ ಎಂದು ಅವರು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ಬೀದರ್ ನಿಂದ ಚಾಮರಾಜನಗರದವರೆಗೆ, ಬಳ್ಳಾರಿಯಿಂದ ಕೋಲಾರದವರೆಗೆ ರಾಜ್ಯಾದ್ಯಂತ ಉತ್ತಮ ಮಳೆಯಾಗಿದೆ. ಜಲಾಶಯಗಳು, ಕೆರೆಕಟ್ಟೆಗಳು ಭರ್ತಿಯಾಗಿರುವುದರಿಂದ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಕೃಷಿಗೆ ಯಾವುದೇ ತೊಂದರೆ ಇಲ್ಲ. ನಮ್ಮ ಸರ್ಕಾರ ವರುಣನ ಕೃಪೆಗೆ ಪಾತ್ರವಾಗಿದೆ ಎಂದು ತಿಳಿಸಿದ್ದಾರೆ.

ಕೆ.ಆರ್.ಎಸ್ ಮೂರನೇ ಬಾರಿಗೆ ಭರ್ತಿಯಾಗಿರುವ ಬಗ್ಗೆ ಇತ್ತಿಚೇಗಷ್ಟೆ ನುಡಿಕರ್ನಾಟಕ.ಕಾಂ ವರದಿ ಮಾಡಿತ್ತು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ