Saturday, November 21, 2026

ಪ್ರಾಯೋಗಿಕ ಆವೃತ್ತಿ

ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಯಲು ಸತ್ಯ ಸಂಗತಿ ಬರೆಯಬೇಕು ; ಚಲುವರಾಯಸ್ವಾಮಿ

‘ಪತ್ರಿಕೋದ್ಯಮ ವಿಶ್ವಾಸಾರ್ಹತೆ ಉಳಿಸಿಕೊಳ್ಳಬೇಕಾದರೆ ಪತ್ರಕರ್ತರು ಸತ್ಯ ಸಂಗತಿಯನ್ನು ಬರೆಯಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಲಹೆ ನೀಡಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಮಂಡ್ಯ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಭಾನುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ವಿಮರ್ಶೆ ಮಾಡಿ ಸುದ್ದಿ ಬರೆದು ಜಾಗೃತಿ ಮೂಡಿಸಬೇಕು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರಿಗೆ ಉಚಿತವಾಗಿ ಬಸ್ ಪಾಸ್ ನೀಡುತ್ತಿದೆ. ನಿವೃತ್ತ ಪತ್ರಕರ್ತರ ಮಾಸಾಶನವನ್ನು 15 ಸಾವಿರಕ್ಕೆ ಹೆಚ್ಚಿಸಿದೆ. ಮುಖ್ಯಮಂತ್ರಿ ಸಂಜೀವಿನಿ ಯೋಜನೆಯಡಿ ? 5 ಲಕ್ಷದ ವರೆಗೆ ವೈದಕೀಯ ವೆಚ್ಚ ಭರಿಸುತ್ತಿದೆ. ಪತ್ರಕರ್ತರು ತಮ್ಮ ಬದುಕು ಕಟ್ಟಿಕೊಳ್ಳುವ ಬಗ್ಗೆ ಚಿಂತಿಸಬೇಕೆಂದರು.

ಪತ್ರಕರ್ತರ ಪಿಂಚಣಿ ಹೆಚ್ಚಿಸಿದ್ದು ಸಿಎಂ ಸಿದ್ದರಾಮಯ್ಯ ; ರವಿಕುಮಾರ್

ಮಂಡ್ಯ ಶಾಸಕ ರವಿಕುಮಾರ್ ಗಣಿಗ ಮಾತನಾಡಿ, ಪತ್ರಕರ್ತರ ಸಮಸ್ಯೆಗಳನ್ನ ಗಮನಿಸಿ ರಾಜ್ಯ ಸರ್ಕಾರ ಸಾಕಷ್ಟು ಅನುಕೂಲಗಳನ್ನು ಮಾಡಿಕೊಟ್ಟಿದೆ. ಗುಣಕ್ಕೆ ಮತ್ಸರವಿಬಾರದು, ಸರ್ಕಾರದ ಸ್ಪಂದನೆಯ ಬಗ್ಗೆ ತಿಳಿಸಬೇಕಾಗಿದೆ. ಕೆ.ವಿ.ಪ್ರಭಾಕರ್, ಲಕ್ಷ್ಮಿನಾರಾಯಣ್ ಹಾಗೂ ನನಗೆ ಪತ್ರಕರ್ತರ ಸಮಸ್ಯೆಗಳು ಆಳವಾಗಿ ತಿಳಿದಿವೆ, ಪ್ರಭಾಕರ್ ಅವರ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದಾರೆ ಎಂದು ಸ್ಮರಿಸಿದರು.

2013 ರಲ್ಲಿ ಪತ್ರಕರ್ತರ ಪಿಂಚಣಿ ಕೇವಲ ಮೂರು ಸಾವಿರ ಇತ್ತು. ನಂತರ 6 ಸಾವಿರ ಮಾಡಿದ್ರು, ಆನಂತರ 9 ಸಾವಿರ ರೂ ಮಾಡಿದ್ರು. ಈಗ 15 ಸಾವಿರ ರೂ. ಆಗಿದೆ. ಇದಕ್ಕೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನಮ್ಮ ಕಾಂಗ್ರೆಸ್ ಸರ್ಕಾರ. ಆದರೆ ಮಧ್ಯದಲ್ಲಿ ಬಂದ ಯಾವ ಸರ್ಕಾರಗಳು ಕೂಡ ಏನನ್ನು ಮಾಡಿಲ್ಲ. ಆದರಿಂದ ಸಿದ್ದರಾಮಯ್ಯ ಅವರಿಗೆ ನಾವೆಲ್ಲ ಋಣಿಯಾಗಿರಬೇಕೆಂದರು.

ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮಾತನಾಡಿ, ‘ಊಹಾತ್ಮಕ ಪತ್ರಿಕೋದ್ಯಮ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದೆ. ಕಾರ್ಪೊರೇಟ್ ಕುಳಗಳ ಹಿಡಿತಕ್ಕೆ ಸಿಕ್ಕಿರುವ ಪರಿಣಾಮ ವಾಸ್ತವ ಸಂಗತಿಗಳ ಮೇಲೆ ಬೆಳಕು ಚೆಲ್ಲಲು ವಿಫಲವಾಗಿದೆ. ಸಾಮಾಜಿಕ ಮಾಧ್ಯಮಗಳು ಜನರ ದಾರಿ ತಪ್ಪಿಸುತ್ತಿವೆ. ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಜನರ ಮೇಲೆ ದಟ್ಟ ಪ್ರಭಾವ ಬೀರಿದ ನೈಜ ಪತ್ರಿಕೋದ್ಯಮ ಈಗ ಇಲ್ಲವಾಗಿದೆ. ಸಿನಿಮಾ ನಟ ಊಟ ಮಾಡಿದ್ದು, ಬಟ್ಟೆ ಹಾಕಿದ್ದನ್ನು ದೊಡ್ಡ ಸುದ್ದಿ ಮಾಡು ತ್ತಿರುವುದು ವಿಷಾದನೀಯ’ ಎಂದರು.

ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ ಮಾತನಾಡಿ, ‘ಸಾಧುಕೋಕಿಲ ಸತ್ತು ಹೋಗಿದ್ದಾನೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪ್ರಚಾರವಾಗಿತ್ತು. ಅಂತಹ ತಪ್ಪುಗಳಿಗೆ ಆಸ್ಪದ ನೀಡಬಾರದು. ಸುದ್ದಿ ಪ್ರಕಟಿಸುವ ಮುನ್ನ ಸತ್ಯ ಶೋಧನೆ ಮಾಡಬೇಕು’ ಎಂದು ಹೇಳಿದರು.

ಜೆಡಿಎಸ್ ರಾಷ್ಟೀಯ ಕಾರ್ಯದರ್ಶಿ ಜಪ್ರುಲ್ಲಾಖಾನ್ ಮಾತನಾಡಿ, ಪತ್ರಿಕೋದ್ಯಮ ಇಂದು ಸಮಾಜವನ್ನು ಸರಿದಾರಿ ತರುವ ಅಥವಾ ಹಳಿ ತಪ್ಪುಸುವಂತಹ ಶಕ್ತಿಯನ್ನು ಹೊಂದಿದೆ. ಆದ್ದರಿಂದ ಪತ್ರಕರ್ತರು ಸಮಭಾಗಿಗಳಾಗಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕೆಂದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಭಾನುವಾರ ಏರ್ಪಡಿಸಿದ್ದ ವತ್ರಿಕಾ ದಿನಾಚರಣೆಯಲ್ಲಿ ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿಯನ್ನು ಸಚಿವ ಎನ್. ಚಲುವರಾಯಸ್ವಾಮಿ ಪ್ರದಾನ ಮಾಡಿದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು ಮಾತನಾಡಿದರು. ಸಂಘದ ಅಧ್ಯಕ್ಷ ಕೆ.ಎನ್. ನವೀನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಪತ್ರಕರ್ತ ರವಿಕುಮಾರ್ ಅವರಿಗೆ ಜೀವಮಾನ ಶ್ರೇಷ್ಠ ಪ್ರಶಸ್ತಿ ಹಾಗೂ ಸುನೀಲ್‌ಕುಮಾರ್, ಎಂ.ಪಿ.ಸಿದ್ದಯ್ಯ, ಆರ್. ಸೋಮಶೇಖರ್, ಶೇಖರ್, ಎಚ್. ವಿ ಮನ ಗೋವಿಂದರಾಜು ಅವರಿಗೆ ವಾರ್ಷಿಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರತಿಭಾವಂತ ಹಾಗೂ ಕ್ರೀಡೆ ಮತ್ತು ಚಟುವಟಿಕೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಆರ್. ನಂದಿನಿ, ಜೆಡಿಎಸ್ ಮುಖಂಡ ಜಫುಲ್ಲಾಖಾನ್, ಪತ್ರಕರ್ತರ ಸಂಘದ ಕಾರ್ಯದರ್ಶಿಗ ಳಾದ ಮತ್ತಿಕೆರೆ ಜಯರಾಂ, ಕೆರಗೋಡು ಸೋಮಶೇಖರ್ ಹಾಗೂ ಕಾರ್ಯದರ್ಶಿ ಅನಂದ್ ಪಾಲ್ಗೊಂಡಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ