Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ :113 ಅಡಿ ದಾಟಿದ ಕೃಷ್ಣರಾಜ ಸಾಗರ ಜಲಾಶಯ

ಕಾವೇರಿ ನದಿ ಪಾತ್ರವಾದ ವಯನಾಡ್ ಹಾಗೂ ಕೊಡಗು ಜಿಲ್ಲೆಯಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಣ್ಣ ಪುಟ್ಟ ತೊರೆ, ಕಣಿವೆ, ಉಪನದಿಗಳಲ್ಲಿ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಕೆ ಆರ್ ಎಸ್ ಆಣೆಕಟ್ಟೆಯ ನೀರಿನ ಮಟ್ಟ 113.40 ಅಡಿಗೆ ತಲುಪಿದೆ.

ಜಲಾಶಯದ ಒಳ ಹರಿವಿನ ಪ್ರಮಾಣ ಗುರುವಾರ ಬೆಳಿಗ್ಗೆ 8 ಗಂಟೆಯ ವೇಳೆಗೆ 36,772 ಕ್ಯೂಸೆಕ್ ದಾಖಲಾಗಿದ್ದು, ಹೊರ ಹರಿವಿನ 2448 ಕ್ಯೂಸೆಕ್ ಇದೆ.

ಜಲಾಶಯದ ಗರಿಷ್ಠ ನೀರಿನಮಟ್ಟ 124.80 ಅಡಿಯಾಗಿದ್ದು, ಜಲಾಶಯ ಭರ್ತಿಗೆ 11 ಅಡಿಯಷ್ಟೇ ಬಾಕಿಯಿದೆ.

ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯ 49.452 ಟಿಎಂಸಿ ಇದ್ದು, ಸದ್ಯ ಜಲಾಶಯದಲ್ಲಿ 35.282  ಟಿಎಂಸಿ ನೀರಿನ ಸಂಗ್ರಹವಿದೆ.

ಹಾರಂಗಿ ಜಲಾಶಯವು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗೆ ಹರಿಸುತ್ತಿರುವುದರಿಂದ ಕೆ ಆರ್ ಎಸ್ ಆಣೆಕಟ್ಟೆಯ ಒಳಹರಿವು ಭಾರೀ ಪ್ರಮಾಣದಲ್ಲಿ ಹೆಚ್ಚಳ ಕಂಡಿದೆ. ಕೊಡಗಿನಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿರುವುದರಿಂದ ಇಂದು ಶಾಲಾ ಕಾಲೇಜುಗಳಿಗೆ ಅಲ್ಲಿನ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ