ಕಾವೇರಿ ನದಿ ಪಾತ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಕೆ.ಆರ್.ಎಸ್ ಗೆ ಬರುತ್ತಿರುವ ಒಳಹರಿವಿನ ಪ್ರಮಾಣ 18,644 ಕ್ಯೂಸೆಕ್ ಗೆ ಏರಿಕೆಯಾಗಿದ್ದು, ಅಣೆಕಟ್ಟೆಯ ನೀರಿನ ಮಟ್ಟವು ಇಂದು (ಜೂ.29) ಕೂಡ 2 ಅಡಿ ಹೆಚ್ಚಳವಾಗಿದ್ದು, 92.80 ಅಡಿಗೆ ತಲುಪಿದೆ.
ಕಳೆದ ಮೂರ್ನಾಲ್ಕು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಬೀಳುತ್ತಿದೆ. ಇದರಿಂದಾಗಿ ಕಾವೇರಿ ನದಿಯು ಮೈದುಂಬಿ ಹರಿಯುತ್ತಿದ್ದು, ಕೆ.ಆರ್.ಎಸ್ ಗೆ ಹೆಚ್ಚಿನ ಪ್ರಮಾಣದ ನೀರು ಹರಿದು ಬರುತ್ತಿದೆ.
ರಾಜ್ಯದಾದ್ಯಂತ ಮುಂಗಾರು ಚುರುಕುಗೊಂಡಿದ್ದು, ಬರುತೇಕ ಎಲ್ಲಾ ಅಣೆಕಟ್ಟೆಗಳಿಗೆ ಒಳ ಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗಿದೆ.