Friday, November 20, 2026

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಎಸ್ ಬಹುತೇಕ ಭರ್ತಿ | ಯಾವುದೇ ಕ್ಷಣದಲ್ಲಿ ಅಣೆಕಟ್ಟೆಯಿಂದ ನೀರು ಬಿಡುಗಡೆ

ಕೃಷ್ಣರಾಜಸಾಗರ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಯಂತೆ ಉತ್ತಮ ಮಳೆಯಾಗುತ್ತಿದ್ದು, ಸೋಮವಾರ (ಜೂ.23) ಬೆಳಿಗ್ಗೆ 8.00 ಗಂಟೆಗೆ 13,856 ಕ್ಯೂಸೆಕ್ಸ್ ನೀರು ಜಲಾಶಯಕ್ಕೆ ಹರಿದು ಬರುತ್ತಿದ್ದು, ಅಣೆಕಟ್ಟೆ ಭರ್ತಿಗೆ ಕೇವಲ 4 ಅಡಿಯಷ್ಟೇ ಬಾಕಿ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಣೆಕಟ್ಟೆಯಿಂದ ಯಾವುದೇ ಕ್ಷಣದಲ್ಲಿ ನೀರು ಹರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ.

ಕೆ.ಆರ್.ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟವು 124.80 ಅಡಿಗಳಾಗಿದ್ದು, ಪ್ರಸ್ತುತ 120.20 ಅಡಿಗಳಷ್ಟು ಭರ್ತಿಯಾಗಿದೆ, ಇನ್ನೂ 4.60 ಅಡಿಗಳಷ್ಟು ನೀರನ್ನು ಜಲಾಶಯದಲ್ಲಿ ಸಂಗ್ರಹಿಸಬಹುದಾಗಿದೆ. ಆದರೆ, ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗಿಂತ ಉತ್ತಮ ಮಳೆಯಾಗುತ್ತಿದ್ದು, ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆ ಇರುವುದರಿಂದ ಜಲಾಶಯದಿಂದ ಯಾವುದೇ ಸಮಯದಲ್ಲಾದರೂ ನದಿಗೆ ಹೆಚ್ಚಿನ ಪ್ರಮಾಣದ ನೀರನ್ನು ಹೊರಬಿಡುವ ಸಾಧ್ಯತೆ ಇದೆ ಎಂದು ಕೆ.ಆರ್.ಎಸ್ ಅಧೀಕ್ಷಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕಾವೇರಿ ನದಿ ಪಾತ್ರ ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು/ ಸ್ಥಳೀಯ ವಾಸಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಸುರಕ್ಷಿತ ಸ್ಥಳಗಳಿಗೆ ತಕ್ಷಣವೇ ತೆರಳಲು ವಿನಂತಿಸಲಾಗಿದೆ. ಈ ಸಂಬಂಧ, ನದಿಪಾತ್ರದ ವ್ಯಾಪ್ತಿಯಲ್ಲಿನ ಎಲ್ಲಾ ನೀರಾವರಿ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರರು ಹಾಗೂ ಕಂದಾಯ ಇಲಾಖೆಯ ಇತರೆ ಎಲ್ಲಾ ಅಧಿಕಾರಿಗಳು ಈ ಬಗ್ಗೆ ತುರ್ತು ಕ್ರಮ ಕೈಗೊಂಡು, ಕಾವೇರಿ ನದಿ ಪಾತ್ರ, ನದಿ ದಂಡೆ ಮತ್ತು ನದಿಯ ಆಸುಪಾಸಿನಲ್ಲಿ ವಾಸಿಸುವ ಎಲ್ಲಾ ಗ್ರಾಮಸ್ಥರು/ ಸ್ಥಳೀಯ ವಾಸಿಗಳಿಗೆ ಸೂಕ್ತ ತಿಳುವಳಿಕೆ ನೀಡಿ, ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಾಡಲು, ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ