Thursday, September 19, 2024

ಪ್ರಾಯೋಗಿಕ ಆವೃತ್ತಿ

ಕ್ಷಯ ಮುಕ್ತ ಮಂಡ್ಯ ಜಿಲ್ಲೆಗೆ ಎಲ್ಲರ ಸಹಕಾರ ಅಗತ್ಯ : ಎಸ್.ಡಿ.ಬೆನ್ನೂರ್

2025 ರ ಒಳಗಾಗಿ ಕ್ಷಯ ಮುಕ್ತ ಮಂಡ್ಯ ಜಿಲ್ಲೆಗೆ ಸಂಕಲ್ಪ ಹೊಂದಿದ್ದು ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎಸ್ ಡಿ ಬೆನ್ನೂರ್ ಹೇಳಿದರು.

ಶ್ರೀರಂಗಪಟ್ಟಣ ತಾಲ್ಲೂಕಿನ ಮೇಳಾಪೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸೂರು ಗ್ರಾಮದ ಶಿವಯ್ಯ ಎಜುಕೇಷನ್ ಟ್ರಸ್ಟ್ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಹದೇವಪುರ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಹಯೋಗದಲ್ಲಿ ನಡೆದ ‘ಕ್ಷಯ ರೋಗ ಜಾಗೃತಿ ಕಾರ್ಯಕ್ರಮ’ ಉದ್ದೇಶಿಸಿ ಅವರು ಮಾತನಾಡಿದರು.

ಭಾರತದಲ್ಲಿ ಕ್ಷಯ ರೋಗವು ಮಾರಕವಾಗಿ ಪರಿಣಮಿಸಿದ್ದು, ಪ್ರತಿ 5 ನಿಮಿಷಕ್ಕೆ ಇಬ್ಬರು ಕ್ಷಯ ರೋಗಿಗಳು ಸರಿಯಾಗಿ ಚಿಕಿತ್ಸೆ ಪಡೆಯಲಾರದೆ ಮರಣ ಹೊಂದುತ್ತಿದ್ದಾರೆ. ಕ್ಷಯರೋಗಕ್ಕೆ ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ ಸೌಲಭ್ಯವಿದೆ. ಆಶಾ ಕಾರ್ಯಕರ್ತೆಯರಿಂದ ಮನೆ ಬಾಗಿಲಿಗೆ ಔಷಧಿ ನೀಡಲಾಗುತ್ತಿದೆ ಕ್ಷಯರೋಗವು ಮೈಕೊ ಬ್ಯಾಕ್ಟೀರಿಯಮ್ ಟುಬರ್ ಕ್ಯುಲೋಸಿಸ್ ಎಂಬ ಸೂಕ್ಷ್ಮಾಣು ಜೀವಿಯಿಂದ ಹರಡುತ್ತಿದ್ದು ಇದರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು ಹೇಳಿದರು.

ಕ್ಷೇತ್ರ ಆರೋಗ್ಯ ನಿರೀಕ್ಷಣಾಧಿಕಾರಿ ಕೃಷ್ಣೇಗೌಡ ಮಾತನಾಡಿ, ಕ್ಷಯ ನಿರ್ಮೂಲನೆಗೆ ಮೇಳಾಪುರ ಗ್ರಾ. ಪಂ. ಅನ್ನು ಕ್ಷಯ ಮುಕ್ತ ಪಂಚಾಯತಿ ಎಂದು ಆಯ್ಕೆ ಮಾಡಲಾಗಿದ್ದು, ಕ್ಷಯ ರೋಗವನ್ನು ಪ್ರಾರಂಭದ ಹಂತದಲ್ಲಿ ಪತ್ತೆ ಹಚ್ಚಿ ಕ್ರಮ ಬದ್ದ ಔಷಧಿಯಿಂದ 6 ತಿಂಗಳಲ್ಲಿ ಸಂಪೂರ್ಣವಾಗಿ ಗುಣಪಡಿಸಬಹುದು. ಚಿಕಿತ್ಸೆ ಜತೆ ನಿಕ್ಷಯ ಪೋಷಣೆಯಡಿ ರೋಗಿಯ ಖಾತೆಗೆ ಪ್ರತಿ ತಿಂಗಳು ರೂ.500 ಜಮೆ ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಕ್ಷಯ ರೋಗ ನಿರ್ಮೂಲನೆ ಮಾಡುವಲ್ಲಿ ಸಹಕಾರ ನೀಡಬೇಕೆಂದು ಕೋರಿದರು.

ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಸತೀಶ, ಸಹಶಿಕ್ಷಕರಾದ ಬಾಲರಾಜು, ಆಶಾ ಕಾರ್ಯಕರ್ತೆಯರಾದ ಮಹಾಲಕ್ಷ್ಮಿ, ಭಾಗ್ಯಲಕ್ಷ್ಮಿ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!