ಕೆ ಆರ್ ಪೇಟೆ ತಾಲ್ಲೂಕಿನ ಕುಂದನಹಳ್ಳಿ ಗೇಟ್ ಬಳಿ KSRTC ಬಸ್ ಮರಕ್ಕೆ ಡಿಕ್ಕಿ ಹೊಡೆದು 5 ಜನ ಗಂಭೀರ ಗಾಯಗೊಂಡು, 20 ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.
ಅಲೇನಹಳ್ಳಿ ಗ್ರಾಮದಿಂದ ಕೆ.ಆರ್.ಪೇಟೆಗೆ ಆಗಮಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ಸಲ್ಲಿ ಪ್ರಯಾಣ ಮಾಡುತ್ತಿದ್ದ ಶಾಲಾ ಮಕ್ಕಳು ಸೇರಿದಂತೆ 25ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನ ಕೆ.ಆರ್.ಪೇಠೆ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. K.R.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




