Friday, November 20, 2026

ಪ್ರಾಯೋಗಿಕ ಆವೃತ್ತಿ

ಸಿಎಂ ಸಿದ್ದರಾಮಯ್ಯ ಸಂಧಾನ ಯಶಸ್ವಿ | KSRTC ನೌಕರರ ಮುಷ್ಕರ ವಾಪಸ್

ಸಾರಿಗೆ ನೌಕರರ ಮುಷ್ಕರಕ್ಕೆ ಸಂಬಂಧಿಸಿದಂತೆ ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರಿಗೆ ಸಚಿವರು ಹಾಗೂ ಸಾರಿಗೆ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಭೆ ನಡೆಸಿ ಸಂಧಾನಕ್ಕೆ ಬಂದ ಹಿನ್ನೆಲೆಯಲ್ಲಿ ಕೆಎಸ್ಆರ್’ಟಿಸಿ ನೌಕರರು ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.

ಸಾರಿಗೆ ನೌಕರರು ತಮ್ಮ ವಿವಿಧ 13 ಬೇಡಿಕೆಗಳನ್ನು ಮುಂದಿಟ್ಟು, ಮುಷ್ಕರಕ್ಕೆ ಕರೆ ನೀಡಿದ್ದರು. ಈ ಎಲ್ಲಾ ಬೇಡಿಕೆಗಳನ್ನು ಮುಂದಿನ ದಿನಗಳಲ್ಲಿ ಸಮಾಲೋಚಿಸಿ, ಪರಿಹರಿಸುವ ನಿರ್ಧಾರಕ್ಕೆ ರಾಜ್ಯ ಸರ್ಕಾರ ಬಂದಿದ್ದು, ಇದರಿಂದ ನೌಕರರು ಮುಷ್ಕರ ಕೈಬಿಡುವುದಾಗಿ ತಿಳಿಸಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ಸಾರಿಗೆ ನಿಗಮಗಳಿಗೆ ನೀಡಬೇಕಿರುವ ಹಣದಲ್ಲಿ ರೂ.5,900 ಕೋಟಿಯನ್ನು ಬಾಕಿ ಉಳಿಸಿದ್ದರಿಂದ ಸಮಸ್ಯೆ ಉದ್ಭವವಾಗಿದೆ. ನೌಕರರ ಕಷ್ಟವನ್ನು ಮನಗಂಡು ರಾಜ್ಯ ಸರ್ಕಾರ ರೂ.2,000 ಕೋಟಿಯನ್ನು ಈಗಾಗಲೇ ಬಿಡುಗಡೆ ಮಾಡಿದ್ದು, ಮುಂಬರುವ ಬಜೆಟ್‌ನಲ್ಲಿ ಬಾಕಿ ಉಳಿದಿರುವ ಹಣವನ್ನು ಬಿಡುಗಡೆಗೊಳಿಸಿ ನೌಕರರ ಹಿತ ಕಾಪಾಡಲು ನಿರ್ಧರಿಸಿದೆ. ಮುಷ್ಕರ ನಿರ್ಧಾರದಿಂದ ಹಿಂದೆ ಸರಿದಿರುವ ಸಾರಿಗೆ ನೌಕರರಿಗೆ ಧನ್ಯವಾದಗಳು. ನಿಮ್ಮ ಅಹವಾಲುಗಳನ್ನು ಸಮಚಿತ್ತದಿಂದ ಆಲಿಸಿ ಪರಿಹರಿಸಲು ಸರ್ಕಾರ ಮುಕ್ತವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ