Wednesday, November 18, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | KSRTC ಶಿಶಿಕ್ಷು ತರಬೇತಿಗೆ ನೇಮಕ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC ) ಮಂಡ್ಯ ವಿಭಾಗದಲ್ಲಿ ಶಿಶಿಕ್ಷು ತರಬೇತಿಗೆ ಖಾಲಿ ಇರುವ ತಾಂತ್ರಿಕ ವೃತ್ತಿಗಳಿಗೆ ಫಿಟ್ಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ಹಾಗೂ ವೆಲ್ಡರ್ (ಐ.ಟಿ.ಐ ನಲ್ಲಿ ತೇರ್ಗಡೆ ಹೊಂದಿದ) ಅಭ್ಯರ್ಥಿಗಳನ್ನು ನಿಯೋಜಿಸಿಕೊಳ್ಳಲಾಗುತ್ತಿದೆ.

ಈ ಕುರಿತು ‌ಮಾಹಿತಿ ನೀಡಿರುವ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಸ್ಥಳೀಯ ಅಭ್ಯರ್ಥಿಗಳು ವಿದ್ಯಾರ್ಹತೆಗೆ ಸಂಬಂಧಿಸಿದ ಮೂಲ ದಾಖಲಾತಿಗಳು ಹಾಗೂ ದಾಖಲಾತಿಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳೊಂದಿಗೆ ಮೇ 20 ರಿಂದ ಮೇ 31 ರ ಅವಧಿಯಲ್ಲಿ ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆವರೆಗೆ(ಭಾನುವಾರ ಹಾಗೂ ಸಾರ್ವತ್ರಿಕ ರಜೆಗಳನ್ನು ಹೊರತುಪಡಿಸಿ) ಮಂಡ್ಯ ವಿಭಾಗೀಯ ಕಛೇರಿಗೆ ಹಾಜರಾಗಿ ದಾಖಲಾತಿಗಳನ್ನು ಸಲ್ಲಿಸಬಹುದಾಗಿದೆ ಎಂದಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ಸಂಬಂಧಪಟ್ಟ ಅಧಿಕಾರಿ, ಘಟಕ ವ್ಯವಸ್ಥಾಪಕರನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಲು ತಿಳಿಸಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ