Sunday, March 3, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಹೇಳಿದರೆ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ: ಚಲುವರಾಯಸ್ವಾಮಿ ಲೇವಡಿ

ಬಿಜೆಪಿ ಹೇಳಿದರೆ ಎಚ್‌ ಡಿ ಕುಮಾರಸ್ವಾಮಿ ಚಡ್ಡಿನೂ ಹಾಕುತ್ತಾರೆ, ದತ್ತ ಮಾಲೆ ಸಹ ಹಾಕಿಕೊಳ್ಳುತ್ತಾರೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದರು.

ಮಂಡ್ಯ ಜಿಲ್ಲೆಯ ಮಳವಳ್ಳಿಯ ಹಲಗೂರಿನಲ್ಲಿ ಬರ ಅಧ್ಯಯನ ವೇಳೆ ಮಾತನಾಡಿದ ಅವರು, “ಕುಮಾರಸ್ವಾಮಿಗೆ ರಾಜ್ಯದ ಜವಾಬ್ದಾರಿ ಹಾಗೂ ಜನರ ಸಮಸ್ಯೆ ಮುಖ್ಯ ಅಲ್ಲ. ಕುಮಾರಸ್ವಾಮಿ ಯಾವತ್ತೂ ಜನರ ಸಮಸ್ಯೆ ಬಗ್ಗೆ ಮಾತನಾಡಿಲ್ಲ. ಎರಡು ಮೂರು ತಿಂಗಳಿನಿಂದ ನಾಲಿಗೆ ಮೇಲೆ ಹಿಡಿತ ಇಲ್ಲದೆ ಮಾತನಾಡುತ್ತಿದ್ದಾರೆ” ಎಂದು ಕಿಡಿಕಾರಿದರು.

“ಕುಮಾರಸ್ವಾಮಿ ಮಾತನಾಡುವುದು ಸರಿ ಅಂದರೆ ನಾನು ಅವರಪ್ಪನ ರೀತಿ ಮಾತಾಡುತ್ತೇನೆ. ಅವರಿಗೆ ಯಾವ ಸಚಿವರು ಕರೆ ಮಾಡಿದ್ದಾರೆ ಅಂತ ದಾಖಲೆ ಬಿಡುಗಡೆ ಮಾಡಲಿ. ಅವರ ಬಳಿ ಪೆನ್‌ಡ್ರೈವ್ ಬಿಡುಗಡೆ ಮಾಡಿ ಅಂತ ಹೇಳಿದ್ದೆವು. ಆದರೆ ಈಗ ಮಂತ್ರಿಗಳು ಕರೆ ಮಾಡಿ ಬಿಡುಗಡೆ ಮಾಡಬೇಡಿ ಅಂತ ಹೇಳಿದ್ದಾರೆ ಎನ್ನುತ್ತಾರೆ. ಅದ್ಯಾವ ಮಂತ್ರಿ ಅಂತ ಹೇಳಲಿ” ಎಂದು ಆಗ್ರಹಿಸಿದರು.

“ಕುಮಾರಸ್ವಾಮಿ ನಾವು ಜಾತ್ಯತೀತ ಅಂದರು. ಮುಸ್ಲಿಂ, ದಲಿತ, ಹಿಂದುಳಿದವರ ಪರ ಎಂದು ಜಾತ್ಯತೀತ ಅಂತ ಹೆಸರಿಟ್ಟುಕೊಂಡಿದ್ದರು. ಈಗ ದತ್ತ ಮಾಲೆ ಹಾಕುತ್ತೀನಿ ಎನ್ನುತ್ತಾರೆ. ಯಾವುದನ್ನು ಹಾಕಿಕೊಳ್ಳುತ್ತಾರೋ ಯಾರ ಪರ, ಯಾವ ಸಮಾಜದ ಪರ ನಿಲ್ಲುತ್ತಾರೋ ಆ ದೇವರೇ ಬಲ್ಲ” ಎಂದು ಕುಟುಕಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!