ಮಹತ್ವದ ಬೆಳವಣಿಗೆಯೊಂದರಲ್ಲಿ ದೆಹಲಿಯಲ್ಲಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ ರೋಚಕ ಬೆಳವಣಿಗೆಯೊಂದು ನಡೆದಿದ್ದು, ಕರ್ನಾಟಕ ಸರ್ಕಾರದ ಪ್ರಭಾವಿ ಮಂತ್ರಿ ಸತೀಶ್ ಜಾರಕಿಹೊಳಿ ಮತ್ತು ಕೇಂದ್ರದ ಪ್ರಭಾವಿ ಮಂತ್ರಿ ಕುಮಾರಸ್ವಾಮಿ ಅವರ ನಡುವೆ ರಹಸ್ಯ ಮಾತುಕತೆ ನಡೆದಿದೆ.
ಸುದ್ದಿ ಮೂಲಗಳ ಪ್ರಕಾರ ಇಬ್ಬರೂ ನಾಯಕರು ಎಲ್ಲಾ ಅಧಿಕಾರಿಗಳನ್ನು ಹೊರಗಿಟ್ಟು ಸರಿ ಸುಮಾರು ಒಂದೂವರೆ ಗಂಟೆಗಿಂತ ಹೆಚ್ಚು ಕಾಲ ಚರ್ಚಿಸಿದ್ದಾರೆ ಎಂದು ತಿಳಿದು ಬಂದಿದೆ.
ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗಲು ಒತ್ತಡ ಹೇರುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ಸತೀಶ್ ಜಾರಕಿಹೊಳಿ ಕುಮಾರಸ್ವಾಮಿ ಇಬ್ಬರೂ ಮಾತಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದೆ.




