Tuesday, November 24, 2026

ಪ್ರಾಯೋಗಿಕ ಆವೃತ್ತಿ

ಕುಂಭಮೇಳ ಯಶಸ್ವಿಗೊಳಿಸಲು ಸೂಚನೆ

ಕೆ.ಆರ್.ಪೇಟೆ ತಾಲ್ಲೂಕು ಅಂಬಿಗರಹಳ್ಳಿ ಹತ್ತಿರವಿರುವ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ಅ.13 ರಿಂದ 16 ರವರೆಗೆ ಅದ್ಧೂರಿಯಾಗಿ ನಡೆಯಲಿದೆ. ಈ ಬೃಹತ್ ಕುಂಭಮೇಳ ಕಾರ್ಯಕ್ರಮಕ್ಕೆ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದನು ಜಿಲ್ಲಾಧಿಕಾರಿ ಎಸ್.ಅಶ್ವತಿ ತಿಳಿಸಿದರು.

ಜಿಲ್ಲಾ ಪಂಚಾಯತಿಯ ಕಾವೇರಿ ಸಭಾಂಗಣದಲ್ಲಿ ತ್ರಿವೇಣಿ ಸಂಗಮದಲ್ಲಿ ಕುಂಭಮೇಳ ಆಚರಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮೂರು ನದಿಗಳ ತ್ರಿವೇಣಿ ಸಂಗಮದಲ್ಲಿ ಕಾವೇರಿ ನದಿ ಪೂಜೆ ಹಾಗೂ ಬಾಗಿನ ಸಮರ್ಪಣೆ ಮಾಡಲಾಗುತ್ತದೆ. ಸಾಧು ಸಂತರು ಹಾಗೂ ಗಣ್ಯರಿಂದ ಕಾರ್ಯಕ್ರಮದ ಉದ್ಘಾಟನೆ ಮಾಡಲಿದ್ದಾರೆ ಎಂದರು.

ಮೂಲ ಸೌಕರ್ಯಗಳಾದ ರಸ್ತೆ, ಶೌಚಾಲಯ,ವಾಹನ ನಿಲ್ದಾಣ, ಕುಡಿಯುವ ನೀರು, ಉಪಾಹಾರ, ನೈರ್ಮಲ್ಯ, ತಂಗುದಾಣಗಳು, ವೈದ್ಯಕೀಯ ಸೇವೆಗಳು ಮತ್ತು ತುರ್ತು ಚಿಕಿತ್ಸೆ, ಅಗ್ನಶಾಮಕದಳ, ರಕ್ಷಣಕಾರ್ಯ, ವಿದ್ಯುತ್ ದೀಪಾಲಂಕಾರ, ಮಾಹಿತಿ ಕೇಂದ್ರ ಗಳ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಿ ಎಂದರು.

ಅಪರ ಜಿಲ್ಲಾಧಿಕಾರಿಗಳಾದ ಡಾ.ಹೆಚ್.ಎಲ್ ನಾಗರಾಜು ರವರು ಮಾತನಾಡಿ ಅಕ್ಟೋಬರ್ .6 ರಂದು ಶ್ರೀ ಮಲೈ ಮಹದೇಶ್ವರ ಬೆಟ್ಟದಲ್ಲಿ ವಿಶೇಷವಾಗಿ ಜ್ಯೋತಿ ರಥಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಗುತ್ತದೆ. ಮಹದೇಶ್ವರ ಜ್ಯೋತಿ ಯಾತ್ರೆ ಮೈಸೂರು, ಚಾಮರಾಜನಗರ ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಿ ಕೆ.ಆರ್ ಪೇಟೆಯ ತ್ರಿವೇಣಿ ಸಂಗಮಕ್ಕೆ ಜ್ಯೋತಿ ರಥ ಬರಲಿದೆ ಎಂದರು.

ಜ್ಯೋತಿ ಯಾತ್ರೆ ಸಂಚರಿಸುವ ಮೂರು ಮಾರ್ಗಗಳಿಗೆ ಸಂಬಂಧಿಸಿದಂತೆ ಮಾರ್ಗ ಅಧಿಕಾರಿಗಳನ್ನು ನೇಮಿಸಲಾಗಿದೆ‌.ಸ್ಥಳೀಯ ಹಾಗೂ ರಾಜ್ಯ ಮಟ್ಟದ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ, ವಿಶೇಷ ಗಂಗಾರತಿ, ಸಾಧು ಸಂತರ ಧಾರ್ಮಿಕ ಸಭೆ ಮಾಡಲಾಗುವುದು ಎಂದರು.

ಸಭೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಉಪವಿಭಾಗಾಧಿಕಾರಿ ಆರ್.ಐಶ್ವರ್ಯ , ಜಿ ಪಂ.ಉಪಕಾರ್ಯದರ್ಶಿ ಸರಸ್ವತಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ