Saturday, May 18, 2024

ಪ್ರಾಯೋಗಿಕ ಆವೃತ್ತಿ

ಕುಂಭಮೇಳ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘಗಳಿಗೆ ಸೂಚನೆ

ಕೆ.ಆರ್.ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡಲು ಶ್ರೀ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸ್ವಸಹಾಯ ಸಂಘ ಸೇರಿದಂತೆ ವಿವಿಧ ಮಹಿಳಾ ಸ್ವಸಹಾಯ ಸಂಘಗಳಿಗೆ ಸೂಚನೆ ನೀಡಲಾಗಿದೆ.

ಅಕ್ಟೋಬರ್ 14 ರಂದು ಮಹಾ ಕುಂಭ ಮೇಳದ ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಮತ್ತು ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಉದ್ಘಾಟನಾ ಕಾರ್ಯಕ್ರಮಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸ್ವಸಹಾಯ ಸಂಘದ ಸದಸ್ಯರನ್ನು ಕರೆತರಲು ಸೂಚಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಯ ಸದಸ್ಯರಾಗಿ ಆಯ್ಕೆ ಮಾಡಿರುವುದರಿಂದ ಕುಂಭಮೇಳ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಸಂಘದ ಸದಸ್ಯರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಲು ಎಲ್ಲಾ ತಾಲ್ಲೂಕಿನ ಸಂಘದ ಮುಖ್ಯಸ್ಥರು ಶ್ರಮಿಸುತ್ತಿದ್ದಾರೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿಯ ಸಂಘಟನೆ ಸದಸ್ಯರನ್ನು ಕರೆದುಕೊಂಡು ಹೋಗಲು ಉಚಿತ ಬಸ್ ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ಯಶಸ್ವಿಯಾಗುವಂತೆ ನೋಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಸಚಿವ ನಾರಾಯಣಗೌಡರ ಹೇಳಿಕೆಯಂತೆ ಪ್ರತಿದಿನ ಎರಡು ಲಕ್ಷ ಜನ ಸೇರಿಸುವ ಟಾರ್ಗೆಟ್ ಇದ್ದು, ಎಲ್ಲೆಡೆಯಿಂದ ವಿವಿಧ ಮಹಿಳಾ ಸ್ವಸಹಾಯ ಸಂಘಗಳಿಗೆ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಲಾಗಿದೆ. ಪೂರ್ಣ ಕುಂಭದ ಮೆರವಣಿಗೆ, ವೇದಿಕೆ ಅಲಂಕಾರ, ಅತಿಥಿಗಳ ಸ್ವಾಗತಕ್ಕೆ ಸಂಘಗಳ ಸದಸ್ಯರನ್ನು ಕಳುಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಸ್ವಸಹಾಯ ಸಂಘದ ಮುಖ್ಯಸ್ಥರ ಮಾತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!