ವಿಕಲಚೇತನರು ಯಾವ ಸಮಸ್ಯೆಯನ್ನ ಎದುರಿಸುತ್ತಿದ್ದಾರೆ, ಅದಕ್ಕೆ ಕಾರಣಗಳೇನು ಎಂಬುದವರ ಬಗ್ಗೆ ತಿಳಿದುಕೊಂಡು ಅಧಿಕಾರಿಗಳು ಪರಿಹರಿಸಲು ಮುಂದಾಗುವಂತೆ ತಹಶೀಲ್ದಾರ್ ಕುಂಞ ಅಹ್ಮದ್ ತಿಳಿಸಿದರು.
ಮಂಡ್ಯದಲ್ಲಿ ಮಂಗಳವಾರ ನಡೆದ ವಿಕಲಚೇತನರ ಕುಂದುಕೊರತೆಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವಿಕಲಚೇತನರ ಕುಂದುಕೊರತೆಗಳನ್ನು ಆಲಿಸಿ, ವಿಕಲಚೇತನ ಮಕ್ಕಳಿಗೆ ಬಯೋಮೆಟ್ರಿಕ್ ಸಮಸ್ಯೆಯವರಿಗೆ ಪಡಿತರ ಚೀಟಿಯ ಸೌಲಭ್ಯಗಳನ್ನು ಒದಗಿಸಿಕೊಡಲಾಗುವುದು. ಜಿಲ್ಲಾ ಆಸ್ಪತ್ರೆಯಲ್ಲಿ ವಿಕಲಚೇತನರಿಗಾಗಿಯೆ ಪ್ರತ್ಯೇಕ ಕೌಂಟರ್ ವ್ಯವಸ್ಥೆಯನ್ನು ಮತ್ತೆ ಮುಂದುವರಿಸಲಾಗುವುದು ಎಂದರು.
ಪಂಚಾಯ್ತಿಗಳಲ್ಲಿ ವಿಕಲಚೇತನರಿಗೆ ಕುಳಿತು ಕೊಳ್ಳಲು ಪ್ರತ್ಯೇಕ ಕೊಠಡಿ ಮತ್ತು ಕುರ್ಚಿಗಳ ವ್ಯವಸ್ಥೆಗಳನ್ನು ಮಾಡಿಕೊಡಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಉಪ ತಹಶಿಲ್ದಾರ್ ವಸಂತ್ ಕುಮಾರ್, ತಾಲ್ಲೂಕು ಆರೋಗ್ಯ ಅಧಿಕಾರಿ ಜವರೇಗೌಡ, ಶ್ರೀನಿವಾಸ್, ಶಿಶು ಅಭಿವೃದ್ಧಿ ಇಲಾಖೆಯ ಸಹಾಯಕ ಯೋಜನಾಧಿಕಾರಿ ನಂಜಮಣಿ, ಮುಖಂಡರಾದ ತಗ್ಗಹಳ್ಳಿ ವೆಂಕಟೇಶ್ ಮತ್ತಿತರರಿದ್ದರು.




