Tuesday, September 17, 2024

ಪ್ರಾಯೋಗಿಕ ಆವೃತ್ತಿ

ಕುವೆಂಪು ಚಿತಾಭಸ್ಮ ಸ್ಮಾರಕ ಭವನಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

ಮೈಸೂರು ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಯಾಚೇನಹಳ್ಳಿಯಲ್ಲಿ ಜು.27ರಂದು ಮಧ್ಯಾಹ್ನ 1 ಗಂಟೆಗೆ ವಿಶ್ವಕವಿ ಕುವೆಂಪು ಚಿತಾಭಸ್ಮ ಸ್ಮಾರಕ ಭವನ ಶಂಕುಸ್ಥಾಪನಾ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸುವರು.

ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭಾಗವಹಿವರು. ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಮಾರಂಭ ಉದ್ಘಾಟಿಸಿ, ಅಧ್ಯಕ್ಷತೆ ವಹಿಸುವರು. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷ ಅನಿಲ್ ಕುಮಾರ್, ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧ್ಯಕ್ಷ ಎ.ಬಿ.ರಮೇಶ್ ಬಂಡಿಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ಉಪಸ್ಥಿತರಿರುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಸುನೀಲ್ ಬೋಸ್, ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ಅತಿಥಿಗಳಾಗಿ ಶಾಸಕರಾದ ತನ್ವೀರ್ ಸೇಠ್, ಎಚ್.ವಿಶ್ವನಾಥ್, ಸಿ.ಎನ್.ಮಂಜೇಗೌಡ, ರವಿಶಂಕರ್, ದರ್ಶನ್ ಧ್ರುವನಾರಾಯಣ್, ಕೆ.ಹರೀಶ್ ಗೌಡ, ಕೆ.ವಿವೇಕಾನಂದ, ಜಿ.ಟಿ.ದೇವೇಗೌಡ, ಡಾ.ಡಿ.ತಿಮ್ಮಯ್ಯ, ಮಧು ಜಿ.ಮಾದೇಗೌಡ, ಜಿ.ಡಿ.ಹರೀಶ್ ಗೌಡ, ಟಿ.ಎಸ್.ಶ್ರೀವತ್ಸ, ಡಾ.ಯತೀಂದ್ರ ಸಿದ್ದರಾಮಯ್ಯ ಸೇರಿದಂತೆ ಮತ್ತಿತರರು ಭಾಗವಹಿಸುವರು.

ಇದೇ ಸಂದರ್ಭದಲ್ಲಿ ‘ನಾದಾಂತರಂಗ’ ಗೌರವ ಗ್ರಂಥವನ್ನು ಪ್ರೊ.ಕೆ.ಎಸ್.ಭಗವಾನ್ ಬಿಡುಗಡೆ ಮಾಡುವರು. ರಾಮಕೃಷ್ಣ ಸೇವಾ ಕೇಂದ್ರದ ವ್ಯವಸ್ಥಾಪಕ ಟ್ರಸ್ಟಿ ನಾದಾನಂದ ನಾಥ ಸ್ವಾಮೀಜಿ, ಧರ್ಮಧರ್ಶಿಗಳಾದ ವೈ.ಎನ್.ಶಂಕರೇಗೌಡ, ಡಾ.ಹೆಚ್.ಎಲ್.ನಾಗರಾಜು, ಎಂ.ಸುದೀರ್ ಹಾಗೂ ವಿ.ಎಚ್.ಮಹೇಶ್ ಭಾಗವಹಿಸುವರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!